ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗ್ಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬಹುಮತ ಹೊಂದಿರುವ ಕಾಂಗ್ರೆಸ್ ನಲ್ಲಿ ಮೇಯರ್ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ.

|
Google Oneindia Kannada News

ಮಂಗಳೂರು, ಮಾರ್ಚ್. 02 : ತೀವ್ರ ಜಿದ್ದಾ-ಜಿದ್ದಿಯಿಂದ ಕೂಡಿರುವ ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ದಿನಾಂಕ ಪ್ರಕಟವಾಗಿದೆ,

ಪ್ರಸಕ್ತ ಮೇಯರ್ ಹರಿನಾಥ್ ಅವರ ಅಧಿಕಾರಾವಧಿ ಮಾರ್ಚ್ 11ಕ್ಕೆ ಕೊನೆಗೊಳ್ಳಲಿದ್ದು, ಮಾರ್ಚ್ 09 ರಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ನಡೆಯಲಿದೆ.

Mangaluru city corporation Mayor, Deputy mayor election on March 9

ಹಿರಿಯ ಐಎಎಸ್ ಅಧಿಕಾರಿ ಮೈಸೂರು ಉಪವಿಭಾಗಾಧಿಕಾರಿ ಜಯಂತಿ ಅವರು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮೇಯರ್ ಉಪಮೇಯರ್ ಚುನಾವಣೆ ಬಳಿಕ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷರ ಚುನಾವಣೆ ನಡೆಯಲಿದೆ.

ಮೇಯರ್ ಸ್ಥಾನವನ್ನು ಈ ಬಾರಿ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಎಲ್ಲ 14 ಮಂದಿ ಮಹಿಳಾ ಕಾರ್ಪೊರೇಟರ್ ಗಳಿದ್ದು ಮೇಯರ್ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ.

ಕಾಂಗ್ರೆಸ್‌ ನ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಸನಿಲ್, ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅಪ್ಪಿ ಹಾಗೂ ಹೊಸಬೆಟ್ಟು ವಾರ್ಡ್ ನ ಪ್ರತಿಭಾ ಕುಳಾಯಿ ಅವರು ಮೇಯರ್ ಸ್ಥಾನದ ಪ್ರಬಲ ಸ್ಪರ್ಧಿಗಳಾಗಿದ್ದಾರೆ.

ದೆರೆಬೈಲ್ ದಕ್ಷಿಣ ವಾರ್ಡ್ ನ ರಜನೀಶ್ ಅವರ ಹೆಸರು ಉಪಮೇಯರ್ ಸ್ಥಾನಕ್ಕೆ ಕೇಳಿ ಬರುತ್ತಿದೆ. ಇನ್ನೂ ಪ್ರತಿಪಕ್ಷ ಬಿಜೆಪಿಗೆ ಬಹುಮತ ಇಲ್ಲದಿದ್ದರು ಮೇಯರ್ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಆದರೆ, ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿಲ್ಲ.

English summary
The Mangaluru Mayor elections which have a tough fight between ladies for Mayor seat has now confirmed the elections to take place on March 9th at in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X