ಚುನಾವಣೆ ಮೇಲೆ ಪರಿಣಾಮ ಬೀರಲಿವೆಯೇ ಕಾಂಗ್ರೆಸ್ ಮುಖಂಡರ ಯಡವಟ್ಟುಗಳು?
ಮಂಗಳೂರು, ಮಾರ್ಚ್ 23: ಕರಾವಳಿಯಲ್ಲಿ ವಿಧಾನಸಭಾ ಚುನಾವಣಾ ಅಖಾಡಾ ರಂಗೇರುತ್ತಿದೆ. ಕರಾವಳಿಯಲ್ಲಿ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಪ್ರವಾಸ ಕರಾವಳಿ ಕೈ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಆದರೆ ಈ ನಡುವೆ ಕರಾವಳಿಯ ಕಾಂಗ್ರೆಸ್ ಮುಖಂಡರು ಒಂದರ ಮೇಲೊಂದು ಎಡವಟ್ಟುಗಳನ್ನು ಮಾಡಿಕೊಳ್ಳುತಲೇ ಇದ್ದು ಚುನಾವಣೆಯಲ್ಲಿ ಇದು ಹಿನ್ನಡೆಯಾಗಿ ಪರಿಣಮಿಸಬಹುದೇ ಎಂಬ ಅನುಮಾನ ಕಾಡುತ್ತಿದೆ.
ಒಂದೆಡೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಯ್ಕೆ ಸಂದರ್ಭದಲ್ಲಿ ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ನ ಮುಸ್ಲಿಂ ಮುಖಂಡರು ಭಾರೀ ಒತ್ತಡ ಹೇರಿದ್ದರು. ಅದರೆ ಮೇಯರ್ ಆಗಿ ವೀರಪ್ಪ ಮೊಯ್ಲಿ ಸಂಬಂಧಿ ಭಾಸ್ಕರ್ ಮೊಯ್ಲಿ ಅವರನ್ನು ಆಯ್ಕೆ ಮಾಡಲಾಯಿತು. ಇದಕ್ಕೆ ಮುಸ್ಲಿಂ ಮುಖಂಡರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ನಾಯಕರ ಈ ನಡೆ ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ಲೇಶಿಸಲಾಗಿತ್ತು.
ಆದರೆ ಈಗ ಮತ್ತೆ ಕಾಂಗ್ರೆಸ್ನ ಮುಖಂಡರೊಬ್ಬರ ಹೇಳಿಕೆ ಕಾಂಗ್ರೆಸ್ ಪರ ಮತ ಚಲಾಯಿಸುವ ಮುಸ್ಲಿಂ ಸಮುದಾಯವನ್ನು ಕೆರಳಿಸಿದೆ. ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕವಿತಾ ಸನಿಲ್ ಈ ರೀತಿಯ ಯಡವಟ್ಟಿಗೆ ಕಾರಣ.

ಮುಸ್ಲಿಮರಲ್ಲಿ ಹೆಚ್ಚಿನವರು ಎಸ್.ಡಿ.ಪಿ.ಐ ನವರು ಅವರನ್ನು ನಂಬಲು ಸಾದ್ಯವಿಲ್ಲ ಎಂದು ಹೇಳಿರುವ ಕವಿತಾ ಸನಿಲ್ ಅವರ ಮಾತು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕವಿತಾ ಸನಿಲ್ ಈ ಹೇಳಿಕೆ ನೀಡಿದ್ದರು ಎಂದು ಹೇಳಲಾಗಿದೆ.
ಸಚಿವ ರಮಾನಾಥ ರೈ, ಜಿಲ್ಲಾ ಪಂಚಾಯತ್ ಸದಸ್ಯ ಮಹಮ್ಮದ್ ಸೇರಿದಂತೆ ಇತರರು ಊಟ ಮಾಡುತ್ತಿದ್ದ ವೇಳೆ ಯಾವುದೋ ವಿಚಾರವಾಗಿ ಚರ್ಚೆ ನಡೆಯುತ್ತಿತ್ತು. ಈ ಸಂದರ್ಭ ಕವಿತಾ ಸನಿಲ್, 'ನಿಮ್ಮವರೆಲ್ಲರನ್ನೂ ನಂಬಲು ಸಾಧ್ಯವಿಲ್ಲ. ನಿಮ್ಮವರಲ್ಲಿ ಹೆಚ್ಚಿನವರು ಎಸ್.ಡಿ.ಪಿ.ಐ ಗೆ ಸೇರಿದವರು ಎಂದು ಹೇಳಿದ್ದರು.

ಸಚಿವ ಬಿ.ರಮಾನಾಥ ರೈ ಮುಂದೆ ಕವಿತಾ ಸನಿಲ್ ಹೀಗೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕವಿತಾ ಸನಿಲ್ ಅವರ ಈ ಹೇಳಿಕೆ ಕಾಂಗ್ರೆಸ್ ಪರ ಮತ ಚಲಾಯಿಸುವ ಮುಸ್ಲಿಂ ಸಮುದಾಯದ ಒಂದು ವರ್ಗವನ್ನು ಕೆರಳಿಸಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ











Click it and Unblock the Notifications