Mangaluru cooker bomb blast case: NIA ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ
ಬೆಂಗಳೂರು, ನವೆಂಬರ್, 30: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ವಿಶೇಷ ನ್ಯಾಯಾಲಯಕ್ಕೆ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶಾರಿಕ್ ಹಾಗೂ ಸಯ್ಯದ್ ಯಾಸೀನ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದು, ಇದರಲ್ಲಿ ಶಂಕಿತ ಉಗ್ರರು ಕುಕ್ಕರ್ನಲ್ಲಿ ಬಾಂಬ್ ತೆಗೆದುಕೊಂಡು, ನಂತರ ಆಟೋದಲ್ಲಿ ಹೋಗಿ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಬ್ಲಾಸ್ಟ್ ಮಾಡಲು ಪ್ಲಾನ್ ಮಾಡಿದ್ದರು ಎನ್ನಲಾಗಿದ್ದು, ಆದರೆ ಕಡಿಮೆ ಒತ್ತಡದಿಂದ ಆಟೋ ರಿಕ್ಷಾದಲ್ಲೇ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು ಎಂದು ತಿಳಿಸಲಾಗಿದೆ.

ಕುಕ್ಕರ್ ಬಾಂಬ್ ತಯಾರಿಕೆಗೆ ಸೈಯದ್ ಯಾಸೀನ್ ಸ್ಫೋಟಕ ವಸ್ತುಗಳ ಪೂರೈಕೆ ಮಾಡಿದ್ದ. ಮಹಮ್ಮದ್ ಶಾರೀಕ್ ದಾಳಿ ನಂತರ ಐಸಿಸ್ ಸೇರಲು ತೀರ್ಮಾನ ಮಾಡಿದ್ದ ಎನ್ನುವ ಸತ್ಯವೊಂದು ಬಯಲಾಗಿದೆ. ಇನ್ನು ಮಂಗಳೂರು ಗೋಡೆ ಬರಹ ಪ್ರಕರಣ, ಶಿವಮೊಗ್ ಟ್ರಯಲ್ ಬಾಂಬ್ ಪ್ರಕರಣದಲ್ಲಿಯೂ ಶಾರೀ ಭಾಗಿಯಾಗಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ.
ಇನ್ನು ಈ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಬೆಯುತ್ತಾ ಹೋದಂತೆಲ್ಲ ಮತ್ತಷ್ಟು ಭಯಾನಕ ಸತ್ಯಗಳು ಬಯಲಾಗುತ್ತಲೇ ಇವೆ. ಅದರಂತೆಯೇ ಇದೀಗ ಮಂಗಳೂರಿನ ಪ್ರಸಿದ್ದ ದೇವಸ್ಥಾನಗಳಲ್ಲಿ ಒಂದಾದ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆರೋಪಿಗಳು ಬಾಂಬ್ ಹಾಕಿ, ಸಮಾಜದಲ್ಲಿ ಶಾಂತಿ ಭಂಗಕ್ಕೆ ಯತ್ನ ಮಾಡಿದ್ದರು ಎನ್ನಲಾಗಿದೆ.
ಈ ಮೂಲಕ ಪ್ರಪಂಚವನ್ನು ಇಸ್ಲಾಂಕರಣ ಮಾಡುವ ಉದ್ದೇಶ ಆರೋಪಿಗಳದ್ದಾಗಿತ್ತು. ಆದರೆ, ಮಂಗಳೂರಿನಲ್ಲಿ ದಾರಿ ಮಧ್ಯೆಯಲ್ಲಿಯೇ ಈ ಕುಕ್ಕರ್ ಬ್ಲಾಸ್ಟ್ ಆಗಿತ್ತು ಎನ್ನಲಾಗಿದೆ.
ಘಟನೆ ಹಿನ್ನೆಲೆ ಏನು?
ನವೆಂಬರ್ 19, 2022 ರಂದು ಮಂಗಳೂರಿನಲ್ಲಿ ಸ್ಫೋಟಗೊಂಡ ಕುಕ್ಕರ್ ಬಾಂಬ್ ಇಡೀ ರಾಜ್ಯವಲ್ಲದೇ ದೇಶವನ್ನೇ ಬೆಚ್ಚಿ ಬೀಲುವಂತೆ ಮಾಡಿತ್ತು. ಮಂಗಳೂರಿನಲ್ಲಿ 2020ರಲ್ಲಿ ಬರೆಯಲ್ಪಟ್ಟಿದ್ದ ಉಗ್ರ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮೊಹಮ್ಮದ್ ಶಾರೀಕ್ ತಂದ ಬಾಂಬ್ ಅವನ ಕಾಲ ಬುಡದಲ್ಲೇ ಸ್ಫೋಟಗೊಂಡು ಆಸ್ಪತ್ರೆಗೆ ದಾಖಲಾಗಿದ್ದ.
ರಾಜ್ಯದಲ್ಲಿ ಐಸಿಸ್ ಮಾದರಿ ಕೃತ್ಯಕ್ಕೆ ಸಂಚು ರೂಪಗೊಂಡಿದ್ದು, ಈ ಸ್ಫೋಟದಿಂದ ಬಯಲಾಗಿತ್ತು. ಅಲ್ಲದೆ, ಶಿವಮೊಗ್ಗದಲ್ಲಿ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ಬಂಧನ ಆಗುತ್ತಿದ್ದಂತೆ ಶಾರೀಕ್ ಅಲ್ಲಿಂದ ಪರಾರಿಯಾಗಿ ಮಂಗಳೂರು, ಮೈಸೂರು, ಕೇರಳ, ತಮಿಳುನಾಡು ಸುತ್ತಾಡಿದ್ದ. ಹಿಂದೂ ವೇಶ ಧರಿಸಿ ಮೈಸೂರಿನಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿಂದ ತನ್ನ ಉಗ್ರ ಕೃತ್ಯ ಮುಂದುವರೆಸಿದ್ದ ಎನ್ನುವ ಭಯಾನಕ ಮಾಹಿತಿಯೊಂದು ಲಭ್ಯವಾಗಿತ್ತು.












Click it and Unblock the Notifications