ಮಂಗಳೂರು: ಗುದದ್ವಾರದಲ್ಲಿ ಚಿನ್ನ ಇಟ್ಟುಕೊಂಡು ಸಾಗಣೆ, ಇಬ್ಬರ ಬಂಧನ
ಮಂಗಳೂರು, ಜೂನ್ 08 : ಗುದದ್ವಾರದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡು ಸಾಗಣೆ ಮಾಡುತ್ತಿದ್ದ ಚಾಲಾಕಿಗಳಿಬ್ಬರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ
ದುಬೈನಿಂದ ಅಕ್ರಮವಾಗಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ದೀಪಕ್ ಇಂದರ್ ದಾಸ್ ಸಿದ್ವಾನಿ ಮತ್ತು ನಿರ್ಮಲ್ ದಾಸ್ ಅವರನ್ನು ಬಂಧಿಸಿ ತಪಾಸಣೆಗೊಳಪಡಿಸಿದಾಗ ಗುದದ್ವಾರದಲ್ಲಿ ಚಿನ್ನ ಅಡಗಿಸಿಕೊಂಡಿರುವುದು ಪತ್ತೆಯಾಗಿದೆ. ಬಂಧಿತರಿಂದ 1 ಕೆ.ಜಿ. 247 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.[ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಸಾಗಣೆ ಮಾಡುತ್ತಿದ್ದ ಮಹಿಳೆ ಬಂಧನ]
ಭಾರತಕ್ಕೆ ಹೋಲಿಸಿದರೆ ದುಬೈನಲ್ಲಿ ಕಡಿಮೆ ಬೆಲೆಗೆ ಚಿನ್ನ ದೊರಕುವ ಹಿನ್ನಲೆಯಲ್ಲಿ ಕೆ.ಜಿಯಷ್ಟು ಚಿನ್ನ ಖರೀದಿಸಿದರೆ ತೆರಿಗೆ ಇಲ್ಲದೆ ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವ ಉದ್ದೇಶದೊಂದಿಗೆ ಸಾಗಾಣಿಗೆ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.