ಮಂಗಳೂರು ದಸರಾ; 300ರೂಪಾಯಿನಲ್ಲಿ ಮಂಗಳೂರಿನ ಒಂಭತ್ತು ದೇವಸ್ಥಾನಗಳ ದರ್ಶನ
ಮಂಗಳೂರು, ಸೆಪ್ಟೆಂಬರ್, 21: ಮೈಸೂರು ದಸರಾ ಬಳಿಕ ರಾಜ್ಯದ ಗಮನಸೆಳೆಯುವ ಮಂಗಳೂರು ದಸರಾಗೆ ಪ್ರವಾಸಿಗರನ್ನು ಆಕರ್ಷಿಸಲು ಕೆಎಸ್ಆರ್‌ಟಿಸಿ ನೂತನ ಪ್ರಯೋಗ ಮಾಡಿದೆ. ಮಂಗಳೂರು ದಸರಾ ದರ್ಶನ ಎಂಬ ಪರಿಕಲ್ಪನೆಯಡಿ ಒಂದು ಇಡೀ ದಿನ ಮಂಗಳೂರಿನ ಒಂಭತ್ತು ದೇವಸ್ಥಾನಗಳನ್ನು ಸಂದರ್ಶಿಸುವ ಪ್ಯಾಕೇಜ್ ಟೂರ್ ಅನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಡಿದೆ.
'ಮಂಗಳೂರು ದಸರಾ ದರ್ಶನ' ಪ್ರವಾಸ ಪ್ಯಾಕೇಜ್
ಕೆಎಸ್‌ಆರ್‌ಟಿಸಿ ವತಿಯಿಂದ 'ಮಂಗಳೂರು ದಸರಾ ದರ್ಶನ' ಪ್ರವಾಸ ಪ್ಯಾಕೇಜ್ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರ ವರೆಗೆ ನಡೆಯಲಿದೆ. ದಸರಾ ವೇಳೆ ಮಂಗಳೂರಿನ ಸುತ್ತ ಮುತ್ತಲಿನ ದೇವಸ್ಥಾನಗಳಿಗೆ ಧಾರ್ಮಿಕ ಪ್ರವಾಸ ಈ ಟೂರ್ ಪ್ಯಾಕೇಜ್‌ನ ಉದ್ದೇಶವಾಗಿದೆ. ಮಂಗಳೂರಿನ ಪ್ರಸಿದ್ಧ 10 ವಿವಿಧ ದೇವಸ್ಥಾನಗಳಿಗೆ ಈ ಪ್ರವಾಸ ಪ್ಯಾಕೇಜ್ ಇರಲಿದ್ದು, ಊಟ, ಉಪಹಾರ ಹೊರತು ಪಡಿಸಿ, ಪ್ರತಿ ಪ್ರಯಾಣಿಕರಿಗೆ ಕನಿಷ್ಠ ದರ ನಿಗದಿಪಡಿಸಲಾಗಿದೆ. ಒಂದು ದಿನದ ಪ್ರವಾಸ ಇದಾಗಿದ್ದು, ಬೆಳಗ್ಗೆ ಹೊರಟರೆ, ದೇವಸ್ಥಾನಗಳ ದರ್ಶನ ಮುಗಿಸಿ ಸಂಜೆ ವೇಳೆಗೆ ವಾಪಸ್ ಆಗಬಹುದು. ಹಸಿರು ಬಣ್ಣದ ನರ್ಮ್ ಬಸ್ ಅನ್ನು ಇದಕ್ಕೆ ಪ್ರಾಯೋಗಿಕವಾಗಿ ಬಳಸಲಾಗುತ್ತಿದೆ. ಒಂದು ಬಸ್‌ನಲ್ಲಿ 40 ಜನರಿಗೆ ಮಾತ್ರ ಅವಕಾಶ ಇರುತ್ತದೆ.

ದಸರಾ ಪ್ರವಾಸದ ಸಮಯ
ಬೆಳಗ್ಗೆ 8 ಗಂಟೆಗೆ ಬಿಜೈ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಿಂದ ಹೊರಟರೆ, ರಾತ್ರಿ 8:30ಕ್ಕೆ ಬಸ್ ನಿಲ್ದಾಣಕ್ಕೆ ಮರಳಲಿದೆ. ಚಾಲಕನಲ್ಲದೆ, ಓರ್ವ ಸಹಾಯಕನೂ ಇರಲಿದ್ದಾರೆ. ಈಗಾಗಲೇ ಆನ್‌ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಆರಂಭಿಸಲಾಗಿದೆ. ಅಲ್ಲದೆ ಬಸ್ ಹೊರಡುವ ಮುನ್ನ ಸ್ಥಳದಲ್ಲೇ ಟಿಕೆಟ್ ಕೂಡ ನೀಡಲಾಗುತ್ತದೆ. ವಯಸ್ಕರಿಗೆ 300 ರೂಪಾಯಿ ಹಾಗೂ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ 250 ರೂಪಾಯಿ ನಿಗದಿಪಡಿಸಲಾಗಿದೆ.

ಮಂಗಳೂರಿನ ಶ್ರೀ ಮಂಗಳಾದೇವಿ, ಪೊಳಲಿ ಶ್ರೀ ರಾಜರಾಜೇಶ್ವರಿ, ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ, ಕಟೀಲು ದುರ್ಗಾಪರಮೇಶ್ವರಿ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ, ಸಸಿಹಿತ್ಲು ಶ್ರೀ ಭಗವತಿ, ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ, ಉರ್ವಾ ಶ್ರೀ ಮಾರಿಯಮ್ಮ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ದರ್ಶನ ಮಾಡಬಹುದಾಗಿದೆ. ಇದರ ನಡುವೆ ಬೀಚ್‌ಗೂ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುತ್ತದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications