ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ.10 ರಿಂದ 14ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

|
Google Oneindia Kannada News

ಮಂಗಳೂರು, ಡಿಸೆಂಬರ್ 10: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮವು ಡಿ.10 ರಿಂದ ಆರಂಭಗೊಳ್ಳಲಿದೆ.

ಗುರುವಾರ(ಡಿ.10) ದಿಂದ 5 ದಿನ ಅಂದರೆ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿ ಭವನಗಳು, ಉದ್ಯಾನ, ಪ್ರವೇಶ ದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳವನ್ನು ಮದುವೆ ಮನೆಯಂತೆ ಸಿಂಗಾರಗೊಂಡಿದೆ. ರಾಜ್ಯದ ಮೂಲೆ ಮೂಲೆಯಿಂದ ಭಕ್ತರನ್ನು ಸೆಳೆಯುತ್ತಿದೆ.

ಆಶ್ಲೇಷ ಪೂಜೆಗೆ ಕುಕ್ಕೆಯಲ್ಲಿ ಸಾಲುಗಟ್ಟಿ ನಿಂತ ಭಕ್ತರುಆಶ್ಲೇಷ ಪೂಜೆಗೆ ಕುಕ್ಕೆಯಲ್ಲಿ ಸಾಲುಗಟ್ಟಿ ನಿಂತ ಭಕ್ತರು

ಪ್ರತಿ ವರ್ಷದಂತೆ ಈ ಬಾರಿಯೂ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಯುಟ್ಯೂಬ್ ಮತ್ತು ಫೇಸ್ ಬುಕ್ ‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರವಾಗಲಿದೆ. ಈ ಬಾರಿ ವಸ್ತುಪ್ರದರ್ಶನ ರದ್ದುಗೊಳಿಸಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡಬೇಕು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಈ ಹಿಂದೆಯೇ ಭಕ್ತರಲ್ಲಿ ವಿನಂತಿಸಿಕೊಂಡಿದ್ದರು.

Mangaluru: Dharmasthala Laksha Deepotsava From December 10 To 14

ಡಿ.13 ರಂದು ಸರ್ವಧರ್ಮ ಸಮ್ಮೇಳನದ 88ನೇ ಅಧಿವೇಶನವನ್ನು ವಸತಿ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದಾರೆ. ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆ ಬಳಿ 3 ಹಾಗೂ 4 BHK ಐಷಾರಾಮಿ ಅಪಾರ್ಟ್ಮೆಂಟ್. ಹೆಚ್ಚಿನ ವಿವರಗಳಿಗೆ ಕ್ಲಿಕ್ ಮಾಡಿ

ಡಿ.14 ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಹಿರಿಯ ವಿದ್ವಾಂಸ ಡಾ.ಎಸ್ ರಂಗನಾಥ್ ಉದ್ಘಾಟಿಸಲಿದ್ದು, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಅದೇ ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ.

Mangaluru: Dharmasthala Laksha Deepotsava From December 10 To 14

ಲಕ್ಷ ದೀಪೋತ್ಸವಕ್ಕೆ ನಾಡಿನ ಲಕ್ಷಾಂತರ ಭಕ್ತರು ಪಾದೆಯಾತ್ರೆಯ ಮೂಲಕ ಬಂದು ಸೇವೆ ಮಾಡುತ್ತಾರೆ. ಅಲ್ಲದೆ ರೈತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಧಾನ್ಯಗಳನ್ನು ಕಾಣಿಕೆಯಾಗಿ ತಂದು ಒಪ್ಪಿಸುತ್ತಾರೆ. ಬೆಂಗಳೂರಿನ ವ್ಯಾಪಾರಿಗಳು ವಿವಿಧ ಹೂಗಳಿಂದ ಕ್ಷೇತ್ರವನ್ನು ಅಲಂಕರಿಸು ಮೂಲಕ ಸೇವೆ ಸಲ್ಲಿಸುತ್ತಿದ್ದಾರೆ.

English summary
Manjunatha Swamy's Laksha Deepavotsava in Dharmasthala will Held from December 10 to 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X