ಬ್ಯಾಂಕ್ ಅಕ್ರಮ ಬಯಲು ಮಾಡದಂತೆ ಸಿಬ್ಬಂದಿಗಳಿಗೆ ಜೀವ ಬೆದರಿಕೆ

ಮಂಗಳೂರು, ಮಾರ್ಚ್. 03 : ಇಲ್ಲಿನ ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್ ಎನ್ನುವರು ತಮ್ಮ ಬ್ಯಾಂಕಿನ ಅಕ್ರಮವನ್ನು ಬಯಲು ಮಾಡದಂತೆ ಅದೇ ಬ್ಯಾಂಕಿನ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿದ್ದಾರೆ.

ತಮ್ಮ ಬ್ಯಾಂಕಿನಲ್ಲಿ ನಡೆಯುವ ಅಕ್ರಮ ವ್ಯವಹಾರಗಳನ್ನು ಯಾರಿಗೂ ತಿಳಿಸಬಾರದು, ಒಂದು ವೇಳೆ ತಿಳಿಸಿದ್ದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ನ ಸಿಬ್ಬಂದಿ ಚಂದ್ರಪ್ರಕಾಶ್ ಅವರು ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ವಿರುದ್ಧ ಬಂದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Mangaluru: Employee claims getting death threat from SCDCC Bank president

ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ಅವರು ಪ್ರಕರಣ ದಾಖಲಿಸಿಕೊಂಡಿದ್ದು ಕಾನೂನಿನ ಪ್ರಕಾರವಾಗಿ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದು ಬ್ಯಾಂಕ್ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.

ಕಪ್ಪು ಹಣವನ್ನು ಬಿಳಿ ಮಾಡಿಕೊಡುವ ದಂಧೆಯಲ್ಲಿ ಈ ಬ್ಯಾಂಕ್‌ ತೊಡಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು.

ನೋಟು ಅಪನಗದೀಕರಣವಾದ ಬಳಿಕ 5 ದಿನಗಳಲ್ಲಿ ಈ ಬ್ಯಾಂಕ್‌ ನಲ್ಲಿ 386 ಕೋಟಿ ರೂಪಾಯಿ ವ್ಯವಹಾರ ನಡೆದಿತ್ತು ಎಂದು ಆರೋಪ ಕೇಳಿ ಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+