ಜಲಸ್ನೇಹಿ ನಗರವಾಗಿ ಮಂಗಳೂರು ಅಭಿವೃದ್ಧಿ: ಸಸಿಕಾಂತ್ ಸೆಂಥಿಲ್
ಮಂಗಳೂರು, ಅಕ್ಟೋಬರ್ .29: ಮಂಗಳೂರು ಮಹಾನಗರವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ವಾಟರ್ ಫ್ರೆಂಡ್ಲಿ ನಗರವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಮಹಾನಗರ ಪಾಲಿಕೆಯ ಸದಸ್ಯರನ್ನು ಉದ್ದೇಶಿ ಮಾತನಾಡಿದ ಅವರು ಮಂಗಳೂರು ನಗರವನ್ನು ಜಲಸ್ನೇಹಿ ನಗರವನ್ನಾಗಿ ಅಭಿವೃದ್ಧಿಪಡಿಸಲು ಅವಕಾಶವಿದೆ.
ದೇಶದಲ್ಲಿ ಮುಂಬೈ ಮತ್ತು ಕೊಚ್ಚಿನ್ ಮಾದರಿಯಲ್ಲೇ ಮಂಗಳೂರನ್ನು ಜಲಸ್ನೇಹಿ ನಗರವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಹಳೆ ಮಂಗಳೂರು ವ್ಯಾಪ್ತಿಯ 8 ವಾರ್ಡ್ ಗಳಲ್ಲಿ ಸುಮಾರು 65 ವಿವಿಧ ಯೋಜನೆಗಳನ್ನು ಅನುಪ್ಠಾನ ಮಾಡುವ ಉದ್ದೇಶ ಹೊಂದಲಾಗಿದೆ.

ಮಂಗಳೂರು ವಾಟರ್ ಫ್ರೆಂಡ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರ ಸರ್ಕಾರ 2016ರಲ್ಲಿ ಅನುಮೋದನೆ ನೀಡಿದೆ. 2017ರ ಏಪ್ರಿಲ್ ನಿಂದ ಯೋಜನೆಯ ಅನುಷ್ಠಾನದ ಪ್ರಕ್ರಿಯೆ ಆರಂಭಗೊಂಡಿದೆ ಎಂಬ ಮಾಹಿತಿ ನೀಡಿದರು.

ಸಭೆಯಲ್ಲಿ ಪಾಲಿಕೆಯ ಆಡಳಿತ ಪಕ್ಷದ ಹಾಗೂ ವಿಪಕ್ಷದ ಸದಸ್ಯರು ಸ್ಮಾರ್ಟ್ ಸಿಟಿ ಯೋಜನೆಯ ಬಗ್ಗೆ ಮನಪಾ ಸದಸ್ಯರಿಗೆ ಸಮರ್ಪಕ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಸ್ಮಾರ್ಟ್ ಸಿಟಿಯ ಬಗ್ಗೆ ಪಾರದರ್ಶಕವಾಗಿ ಮಾಹಿತಿ ನೀಡಲು ವೆಬ್ ಸೈಟ್ ಆರಂಭಿಸಲು ಸೂಚನೆ ನೀಡಿರುವುದಾಗಿ ತಿಳಿಸಿದರು.












Click it and Unblock the Notifications