ಕುಮಾರಸ್ವಾಮಿ ಅವರನ್ನು ಸಿಎಂ ಮಾಡಲು ಒಟ್ಟಾಗಿ ಕೆಲಸ ಮಾಡಲು ಕರೆ

ಮಂಗಳೂರು, ಸೆಪ್ಟೆಂಬರ್ 27 : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಸಂತ ಪೂಜಾರಿ ಅವರ ನೇತೃತ್ವದಲ್ಲಿ ಬೆಂಗ್ರೆ ವಲಯ ಜೆಡಿಎಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಯಿತು. ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಎಲ್ಲಾ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಲು ನಿರ್ಧಾರ ಕೈಗೊಳ್ಳಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಸಂತ್ ಪೂಜಾರಿ ಅವರು, 'ಬೂತ್ ಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಎಲ್ಲ ಬೂತ್ ಕಮಿಟಿಯನ್ನು ರಚಿಸಲಾಗುತ್ತಿದ್ದು. ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು' ಎಂದು ಹೇಳಿದರು.

Mangaluru : JDS boot level committes formation soon

'ಮುಂದಿನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಅಧಿಕಾರ ವಹಿಸಿಕೊಳ್ಳುವ ಅವಧಿ ಬಂದಿದೆ.ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಪಕ್ಷ ಸಂಘಟನೆ ಮಾಡಬೇಕು. ಬೇರು ಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸಿ ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಶಾಸಕರನ್ನು ಕೂಡ ಆಯ್ಕೆ ಮಾಡಿ ಕಳಿಸಲು ಒಟ್ಟಾಗಿ ದುಡಿಯಬೇಕು' ಎಂದು ಕರೆ ನೀಡಿದರು.

ಜಿಲ್ಲಾ ಕಾರ್ಯಧ್ಯಕ್ಷರಾದ ರಾಮ್ ಗಣೇಶ್, ಯುವ ಜನತಾ ದಳ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ, ಜಿಲ್ಲಾ ಯುವ ಮಹಾ ಪ್ರಧಾನ ಕಾರ್ಯದರ್ಶಿ ಮಧುಸೂದನ ಗೌಡ, ಜಿಲ್ಲಾ ಯುವ ಕಾರ್ಯದರ್ಶಿ ಅರ್ಷಕ್ ಇಸ್ಮಾಯಿಲ್ ಸೇರದಂತೆ ಅನೇಕ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+