ಮಂಗಳೂರು ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಕೊಲೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ
ಮಂಗಳೂರು, ಅಕ್ಟೋಬರ್, 05: ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಸೇರಿ ಐವರು ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಗುರುವಾರ (ಅಕ್ಟೋಬರ್ 05) ತೀರ್ಪು ನೀಡಿದೆ.
2011ರ ಏಪ್ರಿಲ್ 28ರಂದು ರಾತ್ರಿ 7:30ಕ್ಕೆ ನಡೆದಿದ್ದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ 6 ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಗೊಳಿಸಿರುವ ಹೈಕೋರ್ಟ್ ಅವರನ್ನು ಕಳೆದ ವಾರ ದೋಷಿಗಳೆಂದು ತೀರ್ಪು ನೀಡಿತ್ತು.

ಆರೋಪಿಗಳಾದ ಡಾ.ರೇಣುಕಾ ಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ವಾಮನ್ ಪೂಜಾರಿ ಶರಣ್ ಪೂಜಾರಿ ಮತ್ತು ಭಾವಾನಿಶಂಕರ್ ದೋಷಿಗಳೆಂದು ಹೈಕೋರ್ಟ್ ತೀರ್ಪು ನೀಡಿತ್ತು. ಇವರಲ್ಲಿ ಶರಣ್ ಗುರುವಾರ ಕೋರ್ಟ್‌ಗೆ ಹಾಜರಾಗದ ಕಾರಣ ಆತನಿಗೆ ಶಿಕ್ಷೆ ಪ್ರಕಟ ಆಗಲಿಲ್ಲ.
ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೊಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿರುವ ಹೈಕೋರ್ಟ್, ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿ ತೀರ್ಮಾನಿಸಿದೆ.
ಇನ್ನು ಡಾ.ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಆ ಮೊತ್ತವನ್ನು ಕೊಲೆಯಾದ ಪ್ರೊ.ರಾಮಕೃಷ್ಣ ಅವರ ಕುಟುಂಬಕ್ಕೆ ನೀಡಲು ಹೈಕೋರ್ಟ್












Click it and Unblock the Notifications