ಮಂಗಳೂರು: ಖ್ಯಾತ ಉದ್ಯಮಿ, ಮಹೇಶ್ ಬಸ್ ಮಾಲೀಕ ಆತ್ಮಹತ್ಯೆಗೆ ಶರಣು
ಮಂಗಳೂರು, ಅಕ್ಟೋಬರ್ 02: ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಮೃತಪಟ್ಟಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಕಾಶ್ ಶೇಖ (43) ಮೃತ ರ್ದುದೈವಿ.
ಮಂಗಳೂರಿನ ಕದ್ರಿ ಕಂಬಳ ರಸ್ತೆಯ ಅಪಾರ್ಟ್ಮೆಂಟ್‌ನಲ್ಲಿ ಪ್ರಕಾಶ್ ಶೇಖ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಖಾಸಗಿ ಬಸ್, ಟೂರಿಸ್ಟ್, ಲಾರಿ ಉದ್ಯಮದಲ್ಲಿ ಹೆಸರು ಮಾಡಿದ್ದ ಪ್ರಕಾಶ್ ಶೇಖ ಅವರು ನೂರಕ್ಕೂ ಅಧಿಕ ಬಸ್‌ಗಳನ್ನು ಹೊಂದಿದ್ದರು.

ಇನ್ನು ಮಂಗಳೂರು, ಉಡುಪಿಯಲ್ಲಿ ಮಹೇಶ್ ಟ್ರಾವೆಲ್ಸ್ ಭಾರೀ ಪ್ರಸಿದ್ಧಿ ಗಳಿಸಿತ್ತು. ಮಂಗಳೂರಿನಲ್ಲಿ ತಮ್ಮದೇ ಆದ ಹೆಸರು ಗಳಿಸಿದ್ದ ಪ್ರಕಾಶ್ ಶೇಖ ಏಕಾಏಕಿ ಸಾವಿಗೆ ಶರಣಾಗಿರುವುದು ನಂಬಲು ಅಸಾಧ್ಯ ಎಂದು ಅನೇಕರು ಸಂತಾಪ ಸೂಚಿಸಿದ್ದಾರೆ. ಆದರೆ ಈವರೆಗೆ ಪ್ರಕಾಶ್ ಶೇಖ ಅವರ ಈ ನಿರ್ಧಾರಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ.
ಖಾಸಗಿ ಬಸ್ ಮಾಲೀಕನ ಆತ್ಮಹತ್ಯೆ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇತ್ತೀಚಿಗೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.
ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾಳೆ. ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.












Click it and Unblock the Notifications