ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಮಿನಿ ವಿಧಾನಸೌಧಕ್ಕೆ ಹೊಸ ಡೆಡ್‌ಲೈನ್!

By ಐಸಾಕ್ ರಿಚರ್ಡ್, ಮಂಗಳೂರು
|
Google Oneindia Kannada News

ಮಂಗಳೂರು ಡಿ. 28 : ಕಳೆದ ಏಳು ವರ್ಷಗಳ ಹಿಂದೆ ಆರಂಭಗೊಂಡು ಕುಂಟುತ್ತಾ ಸಾಗುತ್ತಿರುವ ಮಂಗಳೂರಿನ ಮಿನಿ ವಿಧಾನ ಸೌಧದ ಕಾಮಗಾರಿ ಮೂರು ತಿಂಗಳೊಳಗೆ ಪೂರ್ಣಗೊಳ್ಳಲಿದೆ. 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರಂಭಗೊಂಡ ಸೌಧದ ಕಾಮಗಾರಿ ವೆಚ್ಚ ಇದೀಗ 7.5 ಕೋಟಿ ರೂ.ಗೆ ಏರಿಕೆಯಾಗಿದೆ.

2007ರ ಆಗಸ್ಟ್‌ನಲ್ಲಿ ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರ್ಕಾರದ ಆಡಳಿತವಿದ್ದಾಗ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರ ಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಂಟಿಯಾಗಿ ಮಂಗಳೂರು ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಮಿನಿ ವಿಧಾನಸೌಧ ನಿರ್ಮಾನಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.

Mangaluru mini Vidhana Soudha

ಒಂದು ವರ್ಷದೊಳಗೆ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ನೀಡಿದ್ದರು. ಮೂರು ಅಂತಸ್ತಿನ ಕಟ್ಟಡವಾದ ಮಿನಿ ವಿಧಾನಸೌಧದ ತಳ ಅಂತಸ್ತಿನಲ್ಲಿ ಪಾರ್ಕಿಂಗ್, ರೆಕಾರ್ಡ್ ಮತ್ತು ಸ್ಟೋರ್ ರೂಂ, ಸಬ್ ರಿಜಿಸ್ಟ್ರಾರ್ ಕಚೇರಿ, ಸಭಾಭವನಗಳಿವೆ. ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಪ್ರಥಮ ಮತ್ತು ದ್ವಿತೀಯ ಅಂತಸ್ತಿನಲ್ಲಿರುತ್ತದೆ. [ಮರಿ ಹಾಕದ ಆಡು ಹಾಲು ನೀಡುತ್ತಿದೆ ಕಂಡಿರಾ...!]

ಹೆಚ್ಚುವರಿ ಹಣ ಬಿಡುಗಡೆ : ಮಿನಿ ವಿಧಾನಸೌಧದ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ಹೆಚ್ಚುವರಿ ವೆಚ್ಚವಾದ 2.5 ಕೋಟಿ ರೂ.ಗಳಲ್ಲಿ 1 ಕೋಟಿ ರೂ. ಬಿಡುಗಡೆ ಆಗಿದೆ ಎಂದರು. ಕಾಮಗಾರಿ ಆರಂಭಗೊಂಡರೂ ಸರ್ಕಾರದಿಂದ ಹಣ ಬಿಡುಗಡೆಯಾಗುವಲ್ಲಿ ವಿಳಂಬವಾದ ಕಾರಣ ಕಾಮಗಾರಿ ಕುಂಟುತ್ತಾ ಸಾಗಿದ್ದು, ಮೂರು ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.

English summary
Mangaluru Deputy Commissioner A.B.Ibrahim said the Mini Vidhana Soudha in Mangaluru is likely to be completed within three months. In August 27, 2007, Chief Minister HD Kumaraswamy and DCM B.S Yeddyurappa laid foundation stone for the building.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X