ಜ.26ರಂದು ಎತ್ತಿನಹೊಳೆ ಯೋಜನೆ ವಿರುದ್ಧ ಸರ್ಜಿಕಲ್ ಸ್ಟ್ರೈಕ್
ಮಂಗಳೂರು, ಜನವರಿ. 18 : ಎತ್ತಿನಹೊಳೆ ಯೋಜನೆ ವಿಚಾರವಾಗಿ ಈ ವರೆಗೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರಕಿಲ್ಲವೆಂದು ಮಂಗಳೂರು ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಜನವರಿ 26ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಈ ಬಗ್ಗೆ ಬುಧವಾರ ಸುದ್ದಿಗಾರೊಂದಿಗೆ ಸಮಿತಿ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆ ಕುರಿತು ಪ್ರಸ್ತಾವನೆಯಾಗಿತ್ತು. ಆದರೆ, ಈ ವರೆಗೆ ಯಾವುದೇ ರೀತಿಯ ಸಕಾರಾತ್ಮಕ ಪ್ರತಿಕ್ರಿಯೆ ದೊರಕಿಲ್ಲ.
ಈ ಹಿನ್ನಲೆಯಲ್ಲಿ ಜನವರಿ 26ರಂದು ಸಂಸದರು, ಶಾಸಕರು, ಕಾರ್ಪೋರೇಟರ್ ಮತ್ತು ಚುನಾಯಿತ ಪ್ರತಿನಿಧಿಗಳು ಸೇರಿಕೊಂಡು ಸರ್ಜಿಕಲ್ ಸ್ಟ್ರೈಕ್ ಮಾಡಿಲಿದ್ದೇವೆ ಎಂದರು.

ಇನ್ನೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಎತ್ತಿನಹೊಳೆ ಯೋಜನೆಗೆ ಬೆಂಬಲ ನೀಡುತ್ತಿರುವುದು ನಮ್ಮ ಸಮಿತಿಯ ಸದಸ್ಯರಿಗೆ ನಿಜಕ್ಕೂ ಬೇಸರವನ್ನುಂಟುಮಾಡಿದೆ ಎಂದು ಅವರು ಯಡಿಯೂರಪ್ಪ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಮಂಗಳೂರಿನ ಉಸ್ತುವಾರಿ ಸಚಿವರಾದ ರಾಮನಾಥ ರೈಯವರು ನೇತ್ರಾವತಿ ಯೋಜನೆ ಕಡೆಗೆ ಯಾವುದೇ ಆಸಕ್ತಿ ತೋರಿಸ್ತಾ ಇಲ್ಲ. ರೈ ಬಂಟ್ವಾಳದಲ್ಲಿ ಕೆಲವು ಅಭಿವೃದ್ದಿಯ ಕೆಲಸ ಮಾಡಿರಬಹುದು.
ಆದರೆ, ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಎತ್ತಿನಹೊಳೆ ಯೋಜನೆ ನಿಲ್ಲಿಸಲು ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗದಿರುವುದಕ್ಕೆ ನಿಜಕ್ಕೂ ವಿಯಪಾರ್ಯಾಸ ಎಂದು ದೂರಿದರು.












Click it and Unblock the Notifications