ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನ ಪೊಲೀಸ್ ಕಮಿಷನರ್ ಆಗಿ ವಿಪುಲ್ ಕುಮಾರ ಅಧಿಕಾರ ಸ್ವೀಕಾರ

|
Google Oneindia Kannada News

ಮಂಗಳೂರು ಏಪ್ರಿಲ್ 19 :ಮಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ವಿಪುಲ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿದ ಅವರು ನೇರವಾಗಿ ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ ಅಧಿಕಾರ ವಹಿಸಿಕೊಂದರು.

1999ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ವಿಪುಲ್ ಕುಮಾರ್ ಅವರು ಈ ಹಿಂದೆ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕರಾಗಿ ಕಾರ್ಯನಿರ್ವಹಿದ್ದಾರೆ.

ಮಂಗಳೂರಿನಿಂದ ವರ್ಗಾವಣೆಗೊಂಡಿರುವ ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಅವರಿಂದ ವಿಪುಲ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ವಿಪುಲ್ ಕುಮಾರ್ ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಅನುಕೂಲವ ಆಗುವ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Mangaluru new police commissioner Vipul Kumar Takes Charge

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವ್ಯವಸ್ಥೆ ಮಾಡಲಾಗುವುದೆಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಂಗಳೂರು ಹೊರವಲಯದ ಅಮೃತಧಾರಾ ಗೋಶಾಲೆಯ ದನ ಕಳವು ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡವನ್ನು ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಬಹುಮಾನ ನೀಡಿ ಅಭಿನಂದಿಸಿದರು.

Mangaluru new police commissioner Vipul Kumar Takes Charge

ದನಗಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ದಕ್ಷಿಣ ರೌಡಿ ನಿಗ್ರಹ ದಳ ಹಾಗೂ ಸಿಸಿಬಿ ತಂಡಕ್ಕೆ ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಅವರು ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು.

English summary
Senior IPS officer Vipul Kumar took charge as the new police commissioner of Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X