ಮತದಾರರಿಗೆ ಸೀರೆ ಹಂಚಿದ ಶಾಸಕ ಮೊಯ್ದೀನ್ ಬಾವಾ ಫೊಟೋ ವೈರಲ್

ಮಂಗಳೂರು, ಫೆಬ್ರವರಿ 23: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆ ಬಿರುಸುಗೊಳ್ಳುತ್ತಿದೆ. ಮತದಾರರ ಓಲೈಕೆಗೆ ರಾಜಕೀಯ ಪಕ್ಷಗಳು ನಾನಾ ಕಸರತ್ತು ಆರಂಭಿಸಿವೆ. ಈ ನಡುವೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾರರಿಗೆ ಸೀರೆ ಹಂಚಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯ್ದೀನ್ ಬಾವಾ ಕ್ಷೇತ್ರದ ಮಹಿಳೆಯರಿಗೆ ಸೀರೆ ಹಂಚುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತ ಫೊಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಭಾರೀ ಚರ್ಚೆ ಆರಂಭವಾಗಿದ್ದು ಬಿಜೆಪಿ ಮುಖಂಡರು ಬಾವಾ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಎಂಬಲ್ಲಿ ಶಾಸಕ ಮೊಯ್ದೀನ್ ಬಾವಾ ಮನೆಗಳಿಗೆ ಹಕ್ಕುಪತ್ರ ವಿತರಿಸಿ ಸೀರೆ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಗುರುಪುರದ ಪ್ರತಿ ಮನೆ ಮನೆಗೆ ತೆರಳಿ ಶಾಸಕ ಬಾವಾ ಸೀರೆ ಹಂಚಿದ್ದಾರೆ ಎಂದು ಹೇಳಲಾಗಿದ್ದು, ಇದರ ವಿರುದ್ದ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ.

Mangaluru North MLA Mohiuddin Bava allegedly distributed Sarees to voters

ಶಾಸಕ ಮೊಯಿದ್ದಿನ್ ಬಾವಾ ಕ್ಷೇತ್ರದ ಮತದಾರರಿಗೆ ಸೀರೆ ಹಂಚಿ ಆಮಿಷ ಒಡ್ಡುತ್ತಿದ್ದಾರೆ ಅಲ್ಲದೇ ಕ್ಷೇತ್ರದ ಮತದಾರರಿಗೆ ತಮ್ಮ ಬೆಂಬಲಿಗರ ಮೂಲಕ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಒಂದೊಮ್ಮೆ ಚುನಾವಣಾ ದಿನಾಂಕ ಘೋಷಣೆ ಆದರೆ ನೀತಿ ಸಂಹಿತೆಯ ನಡುವೆ ಈ ಅಕ್ರಮಗಳನ್ನು ನಡೆಸಲು ಅಷ್ಟಸಾಧ್ಯವಾಗುವ ಕಾರಣ ಶಾಸಕರು ಈಗಲೇ ಮತದಾರರಿಗೆ ಆಮಿಷ ಓಡ್ಡಲು ಆರಂಭಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಅವರಿಗೆ ದೂರು ನೀಡಲು ಬಿಜೆಪಿ ಮುಖಂಡರು ತೀರ್ಮಾನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+