• search
 • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕ್ಯಾನ್ಸರ್‌ಗೆ ಮದ್ದು; ಮಂಗಳೂರು ವಿಜ್ಞಾನಿಗಳ ಸಂಶೋಧನೆಗೆ ಪೇಟೆಂಟ್

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 24; ನಮ್ಮ ಪೂರ್ವಜರು ಪ್ರಕೃತಿಯನ್ನು ಉಸಿರಾಗಿಕೊಂಡವರು. ಪ್ರಕೃತಿಯನ್ನೇ ಬದುಕನ್ನಾಗಿಸಿದವರು. ಯಾವುದೇ ಆರೋಗ್ಯ ಸಮಸ್ಯೆಗೆ ಪ್ರಕೃತಿಯಲ್ಲೇ ಮದ್ದು ಹುಡುಕಿ ಅದಕ್ಕೆ ಪರಿಹಾರ ಕಂಡುಕೊಂಡವರು. ಆದರೆ ಕಾಲ ಕಳೆದಂತೆ ಪ್ರಕೃತಿ ನಾಶವಾಗಿ ಜೀವನ ಕ್ರಮವೇ ಬದಲಾಯಿತು. ಗಿಡಮೂಲಿಕೆಗಳ ಚಿಕಿತ್ಸಾ ಪದ್ಧತಿ ಮೂಢನಂಬಿಕೆ ಎಂಬ ಚರ್ಚೆಯಾಗುವ ಮಟ್ಟಿಗೆ ಬದಲಾಗಿಬಿಟ್ಟಿದ್ದೇವೆ.

ಆದರೆ ಹಿತ್ತಲಗಿಡವೇ ಮದ್ದು ಅಂತಾ ಮಂಗಳೂರಿನ ವಿಜ್ಞಾನಿಗಳು ಸಾಧಿಸಿ ತೋರಿಸಿದ್ದಾರೆ. ಸಾಮಾನ್ಯವಾಗಿ ಅರಣ್ಯ ಪ್ರದೇಶಗಳಲ್ಲಿ, ಕೃಷಿ ತೋಟಗಳಲ್ಲಿ ಸಿಗುವ ಹಡೇ ಬಳ್ಳಿಯೂ ಮಾರಕ ಕ್ಯಾನ್ಸರ್ ನಿವಾರಕ ಅನ್ನೋದನ್ನು ಮಂಗಳೂರಿನ ಸಸ್ಯ ವಿಜ್ಞಾನಿಗಳು ಸಾಬೀತು ಮಾಡಿದ್ದಾರೆ.

ಭಾರತದಲ್ಲಿ ಬಿಪಿ, ಶುಗರ್, ಕ್ಯಾನ್ಸರ್, ಟಿಬಿ ಸೇರಿ 39 ಔಷಧಿಗಳ ಬೆಲೆ ಕಡಿತಗೊಳಿಸಿದ ಕೇಂದ್ರ ಸರ್ಕಾರ ಭಾರತದಲ್ಲಿ ಬಿಪಿ, ಶುಗರ್, ಕ್ಯಾನ್ಸರ್, ಟಿಬಿ ಸೇರಿ 39 ಔಷಧಿಗಳ ಬೆಲೆ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಹಡೇ ಬಳ್ಳಿಯನ್ನು ಸಂಶೋಧನೆ ಮಾಡಿ, ಅದನ್ನು ಶುದ್ಧೀಕರಣ ಮಾಡಿ ಕ್ಯಾನ್ಸರ್‌ಗೆ ರಾಮಬಾಣವಾಗುವ ಅಂಶವನ್ನು ಮಂಗಳೂರಿನ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಈ ಅಂಶಕ್ಕೆ ಭಾರತ ಸರ್ಕಾರದಿಂದ ಪೇಟೆಂಟ್ ಸಹ ಪಡೆದಿದ್ದಾರೆ. ಹಡೇ ಬಳ್ಳಿಯ ಮೇಲೆ ನಡೆದ ದೇಶದ ಮೊದಲ ಸಂಶೋಧನೆ ಇದಾಗಿದ್ದು, ಭಾರತದ ಮೊದಲ ಪೇಟೆಂಟ್ ಕೂಡಾ ಇದಾಗಿದೆ.

 ವಿಶ್ವದ 7,40,000 ಕ್ಯಾನ್ಸರ್ ಪ್ರಕರಣಗಳಿಗೆ ಮದ್ಯಪಾನ ಕಾರಣ: ವರದಿ ವಿಶ್ವದ 7,40,000 ಕ್ಯಾನ್ಸರ್ ಪ್ರಕರಣಗಳಿಗೆ ಮದ್ಯಪಾನ ಕಾರಣ: ವರದಿ

ಮಂಗಳೂರು ವಿಶ್ವ ವಿದ್ಯಾನಿಲಯದ ಸಸ್ಯ ಶಾಸ್ತ್ರ ಸಂಶೋಧಕರಾದ ಪ್ರೊ. ಕೆ. ಆರ್ ಚಂದ್ರಶೇಖರ್ ಮತ್ತು ಪ್ರೊ. ಭಾಗ್ಯ ನಕ್ರೆಕಲಾಯ ಹಡೇ ಬಳ್ಳಿಯನ್ನು ಸಂಶೋಧನೆ ಮಾಡಿದ್ದಾರೆ. ಸದ್ಯ ಈ ಇಬ್ಬರೂ ವಿಜ್ಞಾನಿಗಳು ಮಂಗಳೂರು ವಿಶ್ವ ವಿದ್ಯಾನಿಲಯದಿಂದ ನಿವೃತಿಯಾಗಿದ್ದಾರೆ. ಮಂಗಳೂರು ಖಾಸಗಿ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮಾರಕ ಕಾಯಿಲೆ ಕ್ಯಾನ್ಸರ್ ಬಗ್ಗೆ ಇರಲಿ ಎಚ್ಚರ ಮಾರಕ ಕಾಯಿಲೆ ಕ್ಯಾನ್ಸರ್ ಬಗ್ಗೆ ಇರಲಿ ಎಚ್ಚರ

2017ರಲ್ಲಿ ಸಂಶೋಧನೆ ನಡೆಸಿ ಪೇಟೆಂಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಸುದೀರ್ಘ ಸಮಯದ ಬಳಿಕ ಇವರ ಸಂಶೋಧನೆಗೆ ಪೇಟೆಂಟ್ ಲಭ್ಯವಾಗಿದೆ. 20 ವರ್ಷಗಳ ಅವಧಿಗೆ ಪೇಟೆಂಟ್ ಲಭ್ಯವಾಗಿದ್ದು, ಈ ಸಂಶೋಧನಾ‌ ಅಂಶ ಬಳಸಿ ಔಷಧ ತಯಾರು ಮಾಡಬಹುದಾಗಿದೆ.

ಹಡೇ ಬಳ್ಳಿಯ ಅಂಗಾಂಗ ಕಸಿ ಮಾಡಿದ ಬಳಿಕ ರಾಸಾಯನಿಕ ಅಂಶ ಪತ್ತೆ ಮಾಡುವ ಸಂದರ್ಭದಲ್ಲಿ ಕ್ಯಾನ್ಸರ್‌ಗೆ ಮಾರಕವಾಗಬಲ್ಲ ಟೆಂಟ್ರಾಡ್ರೈನ್ ಅಂಶ ಪತ್ತೆಯಾಗಿದೆ. ಭಾರತದಲ್ಲಿ ಈವರೆಗೆ ಯಾರೂ ಈ ವಿಚಾರದಲ್ಲಿ ಸಂಶೋಧನೆ ಮಾಡಿಲ್ಲ .ಹಾಗಾಗಿ ಇದು ಭಾರತದ‌ ಮೊದಲ ಸಂಶೋಧನೆ ಎಂಬ ಗಿರಿಮೆಗೆ ಪಾತ್ರವಾಗಿದೆ.

Mangaluru Plant Researchers Get Patent For Anti Cancer Compound Invention

ಈ ಹಿಂದೆ ಚೀನಾದಲ್ಲೂ ಈ ರೀತಿಯ ಬಳ್ಳಿಯ ಸಂಶೋಧನೆಯನ್ನು ಅಲ್ಲಿನ ವಿಜ್ಞಾನಿಗಳು ಮಾಡಿದ್ದರು. ಅಲ್ಲಿನ ಬಳ್ಳಿಯಲ್ಲೂ ಟೆಂಟ್ರಾಡ್ರೈನ್ ಅಂಶವನ್ನು ಪತ್ತೆ ಮಾಡಿದ್ದರು. ಇದಾದ ಬಳಿಕ ಭಾರತದಲ್ಲಿ ಮೊದಲ ಬಾರಿಗೆ ಮಂಗಳೂರಿನ ವಿಜ್ಞಾನಿಗಳು ಈ ಸಂಶೋಧನೆ ಮಾಡಿದ್ದಾರೆ.

ಸಾಮಾನ್ಯವಾಗಿ ಈ ಹಡೇ ಬಳ್ಳಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಭಾಗದಲ್ಲಿ ಯಥೇಚ್ಛವಾಗಿ ಕಂಡುಬರುತ್ತದೆ. ಗ್ರಾಮೀಣ ಭಾಗದ ಜನರು ಈ ಬಳ್ಳಿಯನ್ನು ಅರೆದು ದೇಹ ತಂಪಾಗಲು ಹಣೆಗೆ ಹಚ್ಚುತ್ತಿದ್ದರು. ನೆಗಡಿ ಜ್ವರ ಶೀತ, ಮಧುಮೇಹ ಸೇರಿದಂತೆ ಕೆಲ ರೋಗಗಳಿಗೆ ಇದು ರಾಮಬಾಣವಾಗಿದೆ.

ಈ ಮೂಲಕ ಪ್ರಕೃತಿ ಯಲ್ಲಿ ಸಿಗುವ ಹಲವು ಸಸ್ಯ ಪ್ರಬೇಧಗಳು ಹಲವು ರೋಗಗಳಿಗೆ ಚಿಕಿತ್ಸೆಯನ್ನು ನೀಡಬಹುದು ಎಂಬುವುದು ಸಾಬೀತಾಗಿದೆ. ಚಿಕಿತ್ಸಾ ವಿಧಾನಗಳು ಮುಂದುವರಿದರೂ, ನಮ್ಮ ಪೂರ್ವಜರು ಮಾಡಿದ ಚಿಕಿತ್ಸಾ ಪದ್ಧತಿಯಲ್ಲಿ ಸತ್ವ ಇದೆ. ಅದರಲ್ಲೂ ಸತ್ಯ ಇದೆ ಎಂಬುವುದು ಈ ಸಂಶೋಧನೆಯಿಂದ ಸಾಬೀತಾಗಿದೆ.

   DK Shivakumar ಹಾಗು Siddaramaiah ಟಾಂಗಾ ಗಾಡಿ ಏರಿ ಪ್ರತಿಭಟಿಸಿದರು | Oneindia Kannada

   ಈ ಹಡೇ ಬಳ್ಳಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಮರ, ಗಿಡವನ್ನು ಆಶ್ರಯಿಸಿ 8 ರಿಂದ 10 ಅಡಿ ಎತ್ತರದ ತನಕ ಬೆಳೆಯುತ್ತದೆ. ಫೆಬ್ರವರಿ, ಮಾರ್ಚ್‌ ತಿಂಗಳಿನಲ್ಲಿ ಹೂ ಬಿಡುತ್ತದೆ. ಇದರ ಕಾಯಿ ಸಣ್ಣ ಹಸಿರು ಬಣ್ಣದಲ್ಲಿದ್ದು, ದ್ರಾಕ್ಷಿಯ ಗೊಂಚಲಿನಂತೆ ಕಾಣುತ್ತದೆ. ಹಣ್ಣಾದ ಬಳಿಕ ಬಿಳಿ ಬಣ್ಣಕ್ಕೆ ತಿರುತ್ತದೆ. ಮಲೆನಾಡು, ಕರಾವಳಿ ಭಾಗದಲ್ಲಿ ಆಹಾರ ಪದಾರ್ಥ ತಂಬುಳಿ ಮಾಡಲು ಸಹ ಇದನ್ನು ಬಳಕೆ ಮಾಡುತ್ತಾರೆ.

   English summary
   Mangaluru based plant researchers K. R. Chandrashekar and Bhagya Nekrakalaya get the patent for anti-cancer compound invention. The invention is titled a process for the extraction and purification of tetrandrine. The invention describes a process for the extraction and purification of tetrandrine from methanol extract of Cyclea peltata commonly known in Kannada as Haade balli.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X