7 ಸರಗಳ್ಳತನ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು

ಮಂಗಳೂರು, ಡಿಸೆಂಬರ್ 11 : ಮಂಗಳೂರು ನಗರ ಕೇಂದ್ರ ರೌಡಿ ನಿಗ್ರಹ ದಳದ ಪೊಲೀಸರು ಇಬ್ಬರು ಸರಗಳ್ಳರನ್ನು ಬಂಧಿಸಿದ್ದಾರೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣಗಳ ಬಗ್ಗೆ ತನಿಖೆ ನಡೆಸಿದ ಮಂಗಳೂರು ನಗರದ ಕೇಂದ್ರ ಉಪ ವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ 07 ಸರಗಳ್ಳತನ ಪ್ರಕರಣಗಳನ್ನು ಭೇದಿಸಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರು ದೇರಳಕಟ್ಟೆ ನಿವಾಸಿ ಹರೀಶ್ ಎಸ್ ನಾಥ್(45), ಕಂಕನಾಡಿ ನಿವಾಸಿ ರಾಜೇಶ್(45) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 3,64 ಲಕ್ಷ ರೂಪಾಯಿ ಮೌಲ್ಯದ ಒಟ್ಟು 126.960 ಗ್ರಾಂ ಚಿನ್ನದ ಆಭರಣಗಳು ಮತ್ತು ಆಕ್ಟಿವಾ ಸ್ಕೂಟರ್ ಸಮೇತ ಒಟ್ಟು 3,74 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನುಪೊಲೀಸರು ವಶಪಡಿಸಿಕೊಂಡಿದ್ದಾರೆ.

Mangaluru Police arrested Chain snatchers

ಮಹಿಳೆಯರ ಕತ್ತಿನಲ್ಲಿದ್ದ ಚಿನ್ನದ ಸರಗಳನ್ನು ಆಕ್ಟೀವಾ ಸ್ಕೂಟರ್ ನಲ್ಲಿ ಬರುವ ಇಬ್ಬರು ಸುಲಿಗೆ ಮಾಡಿಕೊಂಡು ಹೋದ ಬಗ್ಗೆ ಉರ್ವ ಪೊಲೀಸ್ ಠಾಣೆ ಯಲ್ಲಿ 1 ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ 2. ಪ್ರಕರಣ, ಕದ್ರಿ ಪೊಲೀಸ್ ಠಾಣೆಯಲ್ಲಿ 1ಪ್ರಕರಣ, ಕಾವೂರು ಠಾಣೆಯಲ್ಲಿ 1 ಪ್ರಕರಣ ಮತ್ತು ದಕ್ಷಿಣ ಠಾಣೆ ಯಲ್ಲಿ 2 ಸುಲಿಗೆ ಯತ್ನ ಪ್ರಕರಣಗಳು ದಾಖಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+