ಅಕ್ರಮ ಗೋ ಸಾಗಾಟಗಾರರಿಗೆ ಮಂಗಳೂರು ಪೊಲೀಸರ ವಾರ್ನಿಂಗ್
ಮಂಗಳೂರು, ಜುಲೈ 3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಅಕ್ರಮ ಗೋಸಾಗಾಟಗಾರರ ಹೆಡೆ ಮುರಿಕಟ್ಟಲು ಮಂಗಳೂರು ನಗರ ಪೊಲೀಸರು ಪಣತೊಟ್ಟಿದ್ದು, ಈ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅಕ್ರಮ ಗೋಸಾಗಾಟಗಾರರ ಪರೇಡ್ ನಡೆಸಿದ್ದಾರೆ.
ನಗರದ ಇಂಡೋರ್ ಕ್ರೀಡಾಂಗಣದಲ್ಲಿ ದನಕಳ್ಳರ ಪರೇಡ್ ನಡೆಸುವ ಮೂಲಕ ಎಚ್ಚರಿಕೆ ನೀಡಲಾಗಿದೆ. ಮಂಗಳೂರು ವ್ಯಾಪ್ತಿಯ ಒಟ್ಟು 102 ಅಕ್ರಮ ಗೋಸಾಗಾಟಗಾರರು ಪರೇಡ್ ನಲ್ಲಿ ಭಾಗವಹಿಸಿದ್ದು, ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಕ್ರಮ ಗೋಸಾಗಟ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಹತ್ತಿಕ್ಕಲು ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಹೊರತಾಗಿಯೂ ಕಳ್ಳತನ ಮಾಡಿದರೆ ಪೊಲೀಸ್ ಪವರ್ ತೋರಿಸಬೇಕಾಗುತ್ತದೆ ಎಂದು ವಾರ್ನಿಂಗ್ ನೀಡಿದ್ದಾರೆ. ವಿಶ್ವ ಹಿಂದೂ ಪರಿಷತ್ ಜಿಲ್ಲೆಯಾದ್ಯಂತ ಅಕ್ರಮ ಗೋಸಾಗಾಟವನ್ನು ವಿರೋಧಿಸಿ ಪ್ರತಿಭಟನೆ ಕೈಗೊಂಡಿದ್ದು, ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.












Click it and Unblock the Notifications