ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಬಂದರು: ಇದೇ ಮೊದಲ ಬಾರಿಗೆ ಹೊಸ ಆವಿಷ್ಕಾರ

|
Google Oneindia Kannada News

ಮಂಗಳೂರು, ಅ 8: "ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಮಂಗಳೂರಿನ ಬಂದರಿನಲ್ಲಿ ಆಧುನಿಕ ತಾಂತ್ರಿಕತೆಯಲ್ಲಿ ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಿಸುವ ಯೋಜನೆಯನ್ನು ಹಾಕಿಕೊಂಡಿದ್ದೇವೆ" ಎಂದು ಮಂಗಳೂರು ನಗರ ದಕ್ಷಿಣದ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದರು.

ಮಂಗಳೂರು ಮೀನುಗಾರಿಕಾ ಬಂದರು ಪ್ರದೇಶಕ್ಕೆ ಭೇಟಿ ನೀಡಿ ಬಳಿಕ ಮಾತನಾಡಿದ ಶಾಸಕ ಕಾಮತ್ , "ಇಂದಿನ ಆಧುನಿಕತೆಗೆ ಹೊಂದಿಕೊಳ್ಳುವಂತೆ ಸುಮಾರು 6.25 ಕೋಟಿ ವೆಚ್ಚದಲ್ಲಿ ತೇಲಾಡುವ ಕಾಂಕ್ರೀಟ್ ಜೆಟ್ಟಿ ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದೇವೆ" ಎಂದು ಹೇಳಿದರು.

ನಿಲ್ಲಿಸಿದ್ದ ಬಸ್ 65 ಕಿ.ಮೀ. ಓಡಿಸಿಕೊಂಡು ಹೋದ ಯುವಕ ಪೊಲೀಸರ ವಶಕ್ಕೆನಿಲ್ಲಿಸಿದ್ದ ಬಸ್ 65 ಕಿ.ಮೀ. ಓಡಿಸಿಕೊಂಡು ಹೋದ ಯುವಕ ಪೊಲೀಸರ ವಶಕ್ಕೆ

"ಮೀನುಗಾರರ ಹಿತದೃಷ್ಟಿಗೆ ಪೂರಕವಾಗಿರುವ ಈ ಜೆಟ್ಟಿಯು 60 ಮೀಟರ್ ಉದ್ದ ಹಾಗೂ 6 ಮೀಟರ್ ಅಗಲ 1 ಮೀಟರ್ ದಪ್ಪವಾಗಿದ್ದು ಸುಮಾರು 180 ಟನ್ ತೂಕವಿರುತ್ತದೆ. ಮಾತ್ರವಲ್ಲ, 360 ಟನ್ ಭಾರವನ್ನು ಸುಲಭವಾಗಿ ಹೊರುವ ಸಾಮರ್ಥ್ಯ ಇದಕ್ಕಿರುತ್ತದೆ" ಎಂದು ಶಾಸಕರು ಹೇಳಿದರು.

Mangaluru Port: Concrete Jetty Will Be Constructed Which Will Be Safer For Fisherman

"ಟೆಂಪೋಗಳು ಜೆಟ್ಟಿಯ ಮೂಲಕವೇ ಹಾದು ಮೀನುಗಾರಿಕಾ ಬೋಟ್'ಗಳಲ್ಲಿರುವ ಮೀನುಗಳನ್ನು ತುಂಬಿಸಿಕೊಂಡು ಹೋಗಬಹುದಾದಷ್ಟು ಶಕ್ತಿಯುತವಾಗಿರುತ್ತದೆ. ಮೀನುಗಾರಿಕಾ ಬೋಟುಗಳು ಜೆಟ್ಟಿಯನ್ನು ಸೇರುವ ಸಂಪರ್ಕ ಪ್ರದೇಶದ ಜೆಟ್ಟಿಯ ಸುತ್ತಲೂ ರಬ್ಬರಿನ ಪದರವನ್ನು ಅಳವಡಿಸಲಾಗುತ್ತಿದ್ದು ಬೋಟಿನ ಆವರಣಕ್ಕೆ ಹಾನಿಯಾಗದಂತೆ ತಡೆಗಟ್ಟಲು ಇದು ಸಹಕಾರಿಯಾಗಲಿದೆ" ಎಂದು ವೇದವ್ಯಾಸ ಕಾಮತ್ ತಿಳಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ ಸಿದ್ದರಾಮಯ್ಯ ಭವಿಷ್ಯ!ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ ಸಿದ್ದರಾಮಯ್ಯ ಭವಿಷ್ಯ!

"ಜೆಟ್ಟಿಯ ಒಳಗಡೆ ನೀರು, ವಿದ್ಯುತ್ ಸಂಪರ್ಕಗಳೂ ಕೂಡ ದೊರೆಯಲಿದೆ. ವಿಶೇಷವೆಂದರೆ, ನೀರಿನ ಮಟ್ಟದ ಅನುಗುಣವಾಗಿ ಜೆಟ್ಟಿಯು ತೇಲುತ್ತಿರುತ್ತದೆ. ಜೆಟ್ಟಿಯನ್ನು ಬೇರೆಡೆ ಸಿದ್ಧಪಡಿಸಿ ಸಮುದ್ರದ ಮೂಲಕವೇ ತಂದು ಜೋಡಿಸುವುದರಿಂದ ಕಾಮಗಾರಿಯ ಸಂದರ್ಭದಲ್ಲಿ ಮೀನುಗಾರರಿಗೆ ಯಾವುದೇ ರೀತಿಯ ಸಮಸ್ಯೆಯೂ ಉದ್ಭವವಾಗುವುದಿಲ್ಲ" ಎಂದು ಶಾಸಕರು ಈ ಸಂದರ್ಭದಲ್ಲಿ ಹೇಳಿದರು.

"ಈಗಾಗಲೇ ಯೋಜನೆಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು ಸರಕಾರದಿಂದ ಅನುಮೋದನೆ ದೊರೆತ ತಕ್ಷಣವೇ ಕಾಮಗಾರಿ ಪ್ರಾರಂಭವಾಗಲಿದೆ. ಆಧುನಿಕತೆಯತ್ತ ಜಗತ್ತು ಹೊರಳುತ್ತಿರುವಾಗ ನಮ್ಮ ಮಂಗಳೂರು ಅದಕ್ಕಿಂತ ಭಿನ್ನವಾಗಿರದೆ, ಸಾಂಸ್ಕೃತಿಕತೆಯನ್ನು ಉಳಿಸಿಕೊಂಡು ಆಧುನಿಕತೆಯತ್ತ ಹೆಜ್ಜೆ ಹಾಕಬೇಕು ಎನ್ನುವುದು ನಮ್ಮ ಗುರಿ" ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈ ವೇಳೆ ಜೆಟ್ಟಿಯ ವಿನ್ಯಾಸಕಾರ ಮಿಲಿಂದರ್ ಪ್ರಭು, ಅಮುಲ್, ಮೀನುಗಾರರ ಮುಖಂಡರಾದ ನಿತಿನ್ ಕುಮಾರ್, ರಾಜೇಶ್ ಉಳ್ಳಾಲ್, ಮೋಹನ್ ಬೆಂಗ್ರೆ, ನಿತಿನ್ ಬಂಗೇರ, ಇಬ್ರಾಹಿಂ ಬೆಂಗ್ರೆ, ಸಂದೀಪ್ ಉಳ್ಳಾಲ್, ನವೀನ್, ಬಿಜೆಪಿ ಮುಖಂಡರಾದ ಸಂಜಯ್ ಪ್ರಭು, ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ, ವಸಂತ್ ಜೆ ಪೂಜಾರಿ, ವಿನೋದ್ ಮೆಂಡನ್ ಸಹಿತ ಅನೇಕರು ಉಪಸ್ಥಿತರಿದ್ದರು.

English summary
Mangaluru Port: Concrete Jetty Will Be Constructed Soon After Government Approval, Which Will Be Safer For Fisherman, Mangaluru South MLA Vedavyasa Kamath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X