ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Surathkal Toll Gate : ಸುರತ್ಕಲ್ ಟೋಲ್‌ ಬಂದ್‌ಗೆ ಆಗ್ರಹಿಸಿ ಪ್ರತಿಭಟನಾಕಾರರ ಆಕ್ರೋಶ; 360 ಜನ ವಶಕ್ಕೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಅಕ್ಟೋಬರ್‌, 18; ಮಂಗಳೂರು ನಗರದ ಸುರತ್ಕಲ್‌ ಅಕ್ರಮ ಟೋಲ್ ತೆರವು ಆಗ್ರಹಿಸಿ ಟೋಲ್‌ ವಿರೋಧಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಆಕ್ರೋಶಗೊಂಡ ಪ್ರತಿಭಟನಾಕಾರರು ಟೋಲ್ ಸಂಗ್ರಹ ವಸ್ತುಗಳನ್ನು ಒಡೆದು ಹಾಕಿದ್ದಾರೆ. ಈ ವೇಳೆ ಪೊಲೀಸರು 360ಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಎನ್‌ ಶಶಿಕುಮಾರ್‌ ಹೇಳಿದ್ದಾರೆ.

ಮಂಗಳೂರು ನಗರದ ಎನ್ಐಟಿಕೆ ಬಳಿಯಿರುವ ಸುರತ್ಕಲ್ ಟೋಲ್ ಗೇಟ್ ತೆರವು ಮಾಡುವಂತೆ ಶಾಂತಿಯುತವಾಗಿ ಹೋರಾಟ ನಡೆಯಿತ್ತಿತ್ತು. ಈ ವೇಳೆ ಪ್ರತಿಭಟನಾಕಾರರು ಏಕಾಏಕಿ ಟೋಲ್‌ಗೇಟ್‌ಗೆ ಮುತ್ತಿಗೆ ಹಾಕಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ಬ್ಯಾರಿಕೇಡ್ ಅನ್ನು ಇಟ್ಟು ಆಕ್ರೋಶಗೊಂಡ ಪ್ರತಿಭಟನಾಕಾರರನ್ನು ತಡೆಯಲು ಹರಸಾಹಸ ಪಟ್ಟಿದ್ದಾರೆ. ಆದರೂ ಕೂಡ ಸಾವಿರಾರು ಪ್ರತಿಭಟನಾಕಾರರು ಏಕಾಏಕಿ ಬ್ಯಾರಿಕೇಡ್‌ಗಳನ್ನು ತಳ್ಳಿಕೊಂಡು ಟೋಲ್‌ನತ್ತ ಓಡಿ ಬಂದಿದ್ದಾರೆ.

ಸುರತ್ಕಲ್ ಟೋಲ್ ಗೇಟ್‌ ಕಿತ್ತೆಸೆಯಲು ಮುಹೂರ್ತ ಫಿಕ್ಸ್‌ಸುರತ್ಕಲ್ ಟೋಲ್ ಗೇಟ್‌ ಕಿತ್ತೆಸೆಯಲು ಮುಹೂರ್ತ ಫಿಕ್ಸ್‌

ರೊಚ್ಚಿಗೆದ್ದ ಪ್ರತಿಭಟನಾಕಾರರು

ಸ್ಥಳದಲ್ಲಿ ಸಾವಿರಾರು ಪೊಲೀಸರನ್ನು ನಿಯೋಜನೆ ಮಾಡಿದ್ದರೂ ಕೂಡ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಆದರೂ ಟೋಲ್‌ನತ್ತ ನುಗ್ಗಿದ ಪ್ರತಿಭಟನಾಕಾರರು ಅಲ್ಲಿದ್ದ ಟೋಲ್ ಸಂಗ್ರಹ ವಸ್ತುಗಳನ್ನು ಪುಡಿಗಟ್ಟಿದ್ದಾರೆ. ಈ ವೇಳೆ ಪೊಲೀಸರು ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ಟೋಲ್ ತೆರವಿಗೆ ಆಗ್ರಹಿಸಿ ಟೋಲ್ ವಿರೋಧಿ ಸಮಿತಿ ಸಾಕಷ್ಟು ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿತ್ತು. ಇಂದು ಟೋಲ್ ವಿರೋಧಿ ಸಮಿತಿ ನಿರ್ಣಾಯಕ ಹೋರಾಟವನ್ನು ಕೈಗೊಂಡಿತ್ತು. ಕೆಲ ಸಮಯದವರೆಗೆ ಟೋಲ್ ಗೇಟ್‌ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಇದೀಗ ಪೊಲೀಸರು ಟೋಲ್ ಗೇಟ್‌ನಲ್ಲಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

Mangaluru: Protesters lashed in suratkal toll, 360 people arrested

130 ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

ಪ್ರತಿಭಟನಾಕಾರರು ‌ಟೋಲ್ ಗೇಟ್‌ಗೆ ಹಾನಿ ಮಾಡಲು ಮುಂದಾಗಿದ್ದರು. ಈ ವೇಳೆ 130ಕ್ಕೂ ಅಧಿಕ ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದ್ದಾರೆ. ಸದ್ಯ ಟೋಲ್ ಗೇಟ್‌ ಬಳಿ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಸಿಬ್ಬಂದಿಯೊಂದಿಗೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ಆದರೆ ಪ್ರತಿಭಟನೆ ಮಾಡುತ್ತಿದ್ದ ವೇಳೆ ಪೊಲೀಸರು ಹಾಕಿರುವ ಬ್ಯಾರಿಕೇಡ್‌ಗಳನ್ನು ತಳ್ಳಿಕೊಂಡು ನುಗ್ಗಿ ಮುತ್ತಿಗೆ ಹಾಕಿದ್ದಾರೆ‌. ಅದಕ್ಕೆಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿಲ್ಲ

ಟೋಲ್ ಸಂಗ್ರಹ ಸ್ಥಗಿತಗೊಳಿಸಲು ನಮಗೆ ಆಗುವುದಿಲ್ಲ. ಅದನ್ನು ಸಂಬಂಧಿಸಿದ ಇಲಾಖೆ ನಿರ್ಧಾರ ಕೈಗೊಳ್ಳುತ್ತದೆ. ಎನ್ಎಚ್ಐಎ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಟೋಲ್ ಕಲೆಕ್ಷನ್ ವ್ಯತ್ಯಯ ಆಗಿರುವುದಕ್ಕೆ ಸಂಬಂಧಪಟ್ಟವರು ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಹಲ್ಲೆ ನಡೆಸಿಲ್ಲ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

English summary
Mangaluru Commissioner Shashikumar N said protestors demanding of Suratkal toll clearence, more than 360 people arrested. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X