ಮಂಗಳೂರಲ್ಲಿ ಮಟ್ಕಾ ಅಡ್ಡೆ ಮೇಲೆ ಸಿಸಿಬಿ ದಾಳಿ, 6 ಜನರ ಬಂಧನ
ಮಂಗಳೂರು, ನವೆಂಬರ್ 2: ನಗರದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ 6 ಮಂದಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಸರ್ವಿಸ್ ಬಸ್ ನಿಲ್ದಾಣದ ಪರಿಸರದಲ್ಲಿ ಅಕ್ರಮವಾಗಿ ಮಟ್ಕಾ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ರಾಕೇಶ್ ಪೂಜಾರಿ (32), ದಯಾನಂದ (44), ಅಶೋಕ್ (44), ನಂದನ್ (28), ಮಹಮ್ಮದ್ ಯಾಸಿನ್ (21), ಇಮ್ತಿಯಾಸ್ ಅಹಮ್ಮದ್ (44) ಎಂದು ಗುರುತಿಸಲಾಗಿದೆ.
ಬಂಧಿತರಿಂದ ಮಟ್ಕಾ ಆಟಕ್ಕೆ ಬಳಸಿದ 17,970 ರೂಪಾಯಿ ನಗದು, ಮಟ್ಕಾ ನಂಬ್ರ ಬರೆದ ಚೀಟಿಗಳು, 7 ಮೊಬೈಲ್ ಫೋನ್ ಗಳು ಹಾಗೂ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 56,770 ರೂಪಾಯಿ ಎಂದು ಅಂದಾಜಿಸಲಾಗಿದೆ.












Click it and Unblock the Notifications