Get Updates
Get notified of breaking news, exclusive insights, and must-see stories!

ಮಂಗಳೂರಲ್ಲಿ ಎಎಸ್ಐ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ರೌಡಿ

ಮಂಗಳೂರು, ಜುಲೈ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಾಗೂ ಪೋಲೀಸರ ಮೇಲೆ ಇಂಥ ರೌಡಿಗಳಿಗೆ ಭಯ ಇಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ ಮಂಗಳೂರಿನಲ್ಲಿ ನಡೆದ ಈ ಘಟನೆ.

ಮಂಗಳುರಿನ ಪಣಂಬೂರು ಠಾಣೆಯ ಎಎಸ್ಐ ಮೇಲೆ ರೌಡಿಯೋರ್ವ ಕಾರು ಚಲಾಯಿಸಿ ಕೊಲೆಗೆ ಯತ್ನಿಸಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ರೌಡಿಶೀಟರ್ ಹ್ಯಾರಿಸ್ ಈ ಕೃತ್ಯ ಎಸಗಿದ್ದಾನೆ. ಈ ಅಪಘಾತದಲ್ಲಿ ಪಣಂಬೂರು ಠಾಣೆ ಎಎಸ್ಐ ಪುರಂದರ ಗೌಡ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Mangaluru: Rowdy sheeter Harris attacks cop with his car at Panambur

ಹ್ಯಾರೀಸ್ ದರೋಡೆಗೆ ಸಂಚು ರೂಪಿಸಿದ್ದ ವಿಚಾರ ತಿಳಿದ ಪಣಂಬೂರು ಪೊಲೀಸರು ಎರಡು ತಂಡಗಳಾಗಿ ಮಂಗಳೂರಿನ ಕಸಬಾ ಬೆಂಗ್ರೆಯಲ್ಲಿ ರೌಡಿಶೀಡರ್ ಹ್ಯಾರೀಸ್ ನನ್ನು ಹಿಡಿಯಲು ಹೊಂಚು ಹಾಕಿದ್ದರು.

ಈ ವೇಳೆ ಸಾಗಿಬಂದ ಹ್ಯಾರಿಸ್ ಕಾರನ್ನು ನಿಲ್ಲಿಸಲು ಸೂಚಿಸಿದಾಗ ಆತ ನೇರವಾಗಿ ಎಎಸ್ಐಗೆ ಮೇಲೆ ಕಾರನ್ನು ಹಾಯಿಸಲು ಯತ್ನಿಸಿದ್ದಾನೆ.ದರಿಂದ ಎಎಸ್ಐ ಪುರಂದರ ಗೌಡರಿಗೆ ಗಾಯವಾಗಿದ್ದು ಅಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. . ಅವರೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಹದಿನೈದಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿರುವ ಹ್ಯಾರಿಸ್ ವಿರುದ್ಧ ಇದೀಗ ಪಣಂಬೂರು ಠಾಣೆಯಲ್ಲಿ ಕೊಲೆಯತ್ನ ದೂರು ದಾಖಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+