ವಿವಿ ಕುಲಪತಿ ಹುದ್ದೆ ಕೊಡಿಸುವುದಾಗಿ ನಂಬಿಸಿ 17.5 ಲಕ್ಷ ರೂ. ವಂಚನೆ: ಆರೋಪಿ ಬಂಧನ

ಮಂಗಳೂರು, ಮಾರ್ಚ್ 30: ರಾಯಚೂರು ವಿಶ್ವವಿದ್ಯಾಲಯದಲ್ಲಿ ಕುಲಪತಿ ಹುದ್ದೆ ಕೊಡಿಸುತ್ತೇನೆಂದು ನಂಬಿಸಿ 17.5 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣದಲ್ಲಿ ಆರೋಪಿ ಪ್ರಸಾದ್ ಅತ್ತಾವರ ಎಂಬಾತನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ ಪ್ರಾಧ್ಯಾಪಕರೊಬ್ಬರಿಗೆ ವಿವೇಕ್ ಆಚಾರ್ಯ ಮೂಲಕ ಪ್ರಸಾದ್ ಅತ್ತಾವರ ಅವರ ಪರಿಚಯವಾಗಿತ್ತು. ಆರೋಪಿ ಪ್ರಸಾದ್ ಅತ್ತಾವರ ತನಗೆ ಮುಖ್ಯಮಂತ್ರಿ ಸೇರಿದಂತೆ ದೇಶದ ಗಣ್ಯ ವ್ಯಕ್ತಿಗಳ ಪರಿಚಯವಿದೆ ಎಂದು ಸುಳ್ಳು ಹೇಳಿದ್ದಾನೆ.

ನಂತರ ನಿಮಗೆ ರಾಯಚೂರು ವಿಶ್ವವಿದ್ಯಾನಿಲಯದ ಕುಲಪತಿಯನ್ನಾಗಿ ಮಾಡುತ್ತೇನೆ. ಇದಕ್ಕಾಗಿ 30 ಲಕ್ಷ ರೂ. ಹಣ ಕೊಡಬೇಕೆಂದು ತಿಳಿಸಿ, ಒತ್ತಾಯವಾಗಿ 17.5 ಲಕ್ಷ ರೂ. ಹಣ ಪಡೆದು ಉಳಿದ ಹಣಕ್ಕೆ 3 ಖಾಲಿ ಚೆಕ್ ಪಡೆದು ವಂಚಿಸಿದ್ದಾನೆ.

Mangaluru: Rs 17.5 Lakhs Fraud In Kankanadi: Arrest Of Accused

ಮರಳಿ ಹಣ ಕೇಳಿದಾಗ ಹಣ ಕೊಡದೆ ಜೀವ ಬೆದರಿಕೆ ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಂಕನಾಡಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಈತನ ವಿರುದ್ಧ ಮಂಗಳೂರು ಉತ್ತರ ಠಾಣೆ, ಮಂಗಳೂರು ಪೂರ್ವ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದ್ದು, ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಎಂದು ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+