ಸಿಎಂ ವಿರುದ್ಧ ಎಫ್ಐಆರ್ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ
ಮಂಗಳೂರು,
ಮಾರ್ಚ್ 2: ಸಾರ್ವಜನಿಕ ತೆರಿಗೆ ಹಣವನ್ನು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಮಂಗಳೂರಿನ ಆರ್.ಟಿ.ಐ ಕಾರ್ಯಕರ್ತರೋರ್ವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. id="toptextpromo"> id='are-slot-1' class='oiad oi-axt oiadv'>ಶಶಿಧರ್
ಶೆಟ್ಟಿ ಎನ್ನುವವರು ಆರ್.ಟಿ.ಐ ಮುಖಾಂತರ ದಾಖಲೆಗಳನ್ನು ಕಲೆ ಹಾಕಿದ್ದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಮೂವರು ಸಚಿವರ ವಿರುದ್ದ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಮತ್ತು ಎಫ್ಐಆರ್ ದಾಖಲಿಸಲು ಅನುಮತಿ ನೀಡಿ ಎಂದು ಅವರು ಮನವಿಯಲ್ಲಿ ಕೇಳಿಕೊಂಡಿದ್ದಾರೆ. id='are-slot-2' class='oiad oi-axt oiadv'>
ಸರಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿನಿ ವಿಧಾನಸೌಧ ಉದ್ಘಾಟನೆಗೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಡಿ.ಕೆ. ಶಿವಕುಮಾರ್ , ರಮಾನಾಥ ರೈ, ಯು.ಟಿ. ಖಾದರ್ ಅವರು ರಾಜಕೀಯ ಭಾಷಣ ಮಾಡಿದ್ದಾರೆ ಎಂದು ಶಶಿಧರ್ ಶೆಟ್ಟಿ ಆರೋಪಿಸಿದ್ದಾರೆ.

ಖರ್ಚು ಮಾಡಿದ್ದೆಲ್ಲಾ ಸರಕಾರಿ ಹಣ
ಕಳೆದ ಅಕ್ಟೋಬರ್ 22ರಂದು ಸಿದ್ದರಾಮಯ್ಯನವರು ಬಂಟ್ವಾಳದಲ್ಲಿ ಮಿನಿ ವಿಧಾನಸೌಧ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ವೇದಿಕೆ, ಊಟೋಪಚಾರ, ಸಾರಿಗೆ, ಮೈಕ್, ಶಾಮಿಯಾನ ಮತ್ತು ಇತರ ಖರ್ಚುಗಳಿಗೆ ಸರ್ಕಾರಿ ತೆರಿಗೆ ಹಣವನ್ನು ಉಪಯೋಗಿಸಲಾಗಿದೆ.

ಜನರ ಹಣದಲ್ಲಿ ಚುನಾವಣಾ ಪ್ರಚಾರ
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಸಮ್ಮುಖದಲ್ಲೇ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರವನ್ನು ಮಾಡಿದ್ದಾರೆ. ಈ ಮೂಲಕ ಜನರ ಹಣವನ್ನು ಚುನಾವಣಾ ಪ್ರಚಾರಕ್ಕೆ ಬಳಸಿ ತೆರಿಗೆ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಪಕ್ಷದ ಕಾರ್ಯಕ್ರಮಕ್ಕೆ ಹಣ ವ್ಯಯ
ಒಟ್ಟು 2 ಲಕ್ಷ ರೂಪಾಯಿಯನ್ನು ಇದಕ್ಕಾಗಿ ವ್ಯಯಿಸಿದ್ದು ಪಕ್ಷದ ಕಾರ್ಯಕ್ರಮಕ್ಕೆ ಸಾರ್ವಜನಿಕರ ತೆರಿಗೆ ಹಣವನ್ನು ಉಪಯೋಗಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಎಫ್ಐಆರ್ ಗೆ ಅನುಮತಿ ನೀಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಮಾನಾಥ ರೈ, ಯು.ಟಿ. ಖಾದರ್ ವೇದಿಕೆಯಲ್ಲಿ ಪಕ್ಷದ ಪರವಾದ ಭಾಷಣವನ್ನು ಮಾಡಿದ್ದು ಈ ನಾಲ್ವರ ವಿರುದ್ದವೂ ರಾಜ್ಯಪಾಲರಿಗೆ ದೂರು ನೀಡಿರುವ ಶಶಿಧರ ಶೆಟ್ಟಿ, ಎಫ್ಐಆರ್ ದಾಖಲಿಸಲು ಅನುಮತಿ ಕೊಡುವಂತೆ ಮನವಿ ಸಲ್ಲಿಸಿದ್ದಾರೆ.












Click it and Unblock the Notifications