'15 ಕೋಟಿ ರೂ.ವೆಚ್ಚದಲ್ಲಿ ಕಸಾಯಿಖಾನೆ ರಚಿಸಲು ಮುಂದಾಗಿರುವುದು ದುರಂತ'

ಮಂಗಳೂರು, ಅಕ್ಟೋಬರ್ 07 : ಕೇಂದ್ರ ಸರಕಾರ ಸ್ಮಾರ್ಟ್ ಸಿಟಿ ಯೋಜನೆ ಅಡಿ ನೀಡಿರುವ ಹಣವನ್ನು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಕಸಾಯಿಖಾನೆ ರಚಿಸಲು ಮುಂದಾಗಿರುವುದು ದುರಂತ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಅವರು ಮಂಗಳೂರು ನಗರದಲ್ಲಿ ಅನುಷ್ಠಾನಗೊಳ್ಳುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಸಂಪೂರ್ಣ ಗೊಂದಲಮಯವಾಗಿದ್ದು ಯೋಜನೆಯ ಕೋಟ್ಯಂತರ ರೂಪಾಯಿ ದುರುಪಯೋಗವಾಗುತ್ತಿದೆ.

ರಾಜ್ಯ ಸರ್ಕಾರ ತಕ್ಷಣ ಸ್ಮಾರ್ಟ್ ಸಿಟಿ ಯೋಜನೆಗೆ ಪೂರ್ಣ ಪ್ರಮಾಣದ ಎಂಡಿ ಹಾಗೂ ಸಲಹಾ ಸಮಿತಿ ರಚಿಸಬೇಕು. ದೇಶದ ನಗರ ಹಾಗು ಪಟ್ಟಣಗಳ ಸಮಗ್ರ ಅಭಿವೃದ್ದಿ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಿದೆ.

Nalin Kumar Kateel

ಆದರೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಸಮಗ್ರ ಅಭಿವೃದ್ಧಿಯ ಉದ್ದೇಶವನ್ನೇ ಮರೆತು ಕಸಾಯಿಖಾನೆ ಅಭಿವೃದ್ಧಿಗೆ ಮುಂದಾಗಿದೆ ಎಂದು ನಳಿನ್ ಕುಮಾರ್ ಕಿಡಿಕಾರಿದು.

ಸ್ಮಾರ್ಟ್ ಸಿಟಿಯೋಜನೆಯಡಿ ನಿಗದಿತ ದರಕ್ಕಿಂತ ಹೆಚ್ಚಿನ ದರ ನಮೂದಿಸಿ ಕಾಮಗಾರಿ ಗುತ್ತಿಗೆ ನೀಡಲಾಗುತ್ತಿದೆ ಎಂದು ದೂರಿದ ಅವರು ಸ್ಮಾರ್ಟ್ ಸಿಟಿ ಯೋಜನೆಯಡಿ ಯಾವುದೇ ಕಾಮಗಾರಿ ಪೂರ್ಣವಾಗಿಲ್ಲ. ಹಣ ದುರುಪಯೋಗವಾಗುವ ಸಾಧ್ಯತೆ ಇದೆ ಎಂದರು.

ಅಕ್ರಮಗಳು ನಡೆಯುವ ಆರೋಪ ಹೊಂದಿರುವ ಮಂಗಳೂರಿನ ಕಸಾಯಿಖಾನೆಗೆ ಸ್ಮಾರ್ಟ್ ಸಿಟಿಯ 15 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಹೇಳಿದ್ದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ರವರ ಹೇಳಿಕೆ ವಿವಾದ ಸೃಷ್ಟಿಸಿತ್ತು.

ಮಂಗಳೂರಿನ ಕುದ್ರೋಳಿಯಲ್ಲಿರುವ ಕಸಾಯಿಖಾನೆ ಅಕ್ರಮವಾಗಿ ನಡೆಯುತ್ತಿರುವ ಕಸಾಯಿಖಾನೆ ಎಂಬ ಆರೋಪವನ್ನು ಹೊಂದಿದ್ದು, ಜಿಲ್ಲೆಯಲ್ಲಿ ಕದ್ದ ದನಗಳನ್ನೆಲ್ಲಾ ಕುದ್ರೋಳಿ ಕಸಾಯಿಖಾನೆಯಲ್ಲೇ ವಧೆ ಮಾಡುವ ಆರೋಪವಿದೆ.

ಈ ಹಿನ್ನೆಲೆಯಲ್ಲಿ ಅದೇ ಕಸಾಯಿಖಾನೆಯ ಅಭಿವೃದ್ಧಿ ಸಚಿವ ಯುಟಿ ಖಾದರ್ 15 ಕೋಟಿ ರೂಪಾಯಿ ಅನುದಾನ ನೀಡುವ ಹೇಳಿಕೆ ವಿವಾದ ಸೃಷ್ಟಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+