ಮಂಗಳೂರು:ಮೂವರು ಗಾಂಜಾ ಮಾರಾಟಗಾರರಿಗೆ ಜೈಲು ಶಿಕ್ಷೆ
ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳಿಗೆ ಮಂಗಳೂರಿನ ವಿಶೇಷ ನ್ಯಾಯಾಲಯ ಶಿಕ್ಷೆ ನೀಡಿ ತೀರ್ಪು ನೀಡಿದೆ.
ಮಂಗಳೂರು, ಸೆಪ್ಟೆಂಬರ್ 01 : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳಿಗೆ ಮಂಗಳೂರಿನ ವಿಶೇಷ ನ್ಯಾಯಾಲಯವು ಶಿಕ್ಷೆ ನೀಡಿ ತೀರ್ಪು ನೀಡಿದೆ.
ನರಿಂಗಾನ ತೌಡುಗೋಳಿಯ ಹಫೀಝ್ , ಮಂಜೇಶ್ವರ ಉಪ್ಪಳದ ಮಹಮ್ಮದ್ ಸಿರಾಜ್, ಬೆಳ್ಮ ರೆಂಜಾಡಿಯ ಮಹಮ್ಮದ್ ಇಮ್ತಿಯಾಜ್ ಅವರಿಗೆ ಮಾದಕ ದ್ರವ್ಯ ಕಾಯ್ದೆಯಡಿ ಶುಕ್ರವಾರ ಇಲ್ಲಿನ ವಿಶೇಷ ನ್ಯಾಯಾಲಯ 1 ವರ್ಷ 6 ತಿಂಗಳು ಜೈಲು ಶಿಕ್ಷೆ ಮತ್ತು 15 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

2016ರ ಮೇ 10ರಂದು ಕುರ್ನಾಡು ಹೂವಿನ ಕೊಪ್ಪಲದಿಂದ ಬೈಕ್ ನಲ್ಲಿ ಆರೋಪಿಗಳಿಂದ ಅಕ್ರಮ ಗಾಂಜಾ ಸಾಗಾಟ ಪ್ರಕರಣ ಕ್ಕೆ ಸಂಬಂಧಿಸಿದಂತೆ ಈ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.
ಗಾಂಜಾ ಸಾಗಾಟದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದ ಕೋಣಾಜೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
ಬಂಧಿತ ಮೂವರು ಆರೋಪಿಗಳಿಂದ 1ಕೆಜಿ 100ಗ್ರಾಂ ಗಾಂಜಾ, 1 ತಲವಾರನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಪ್ರಕರಣದ ಕುರಿತು ತನಿಖೆ ನಡೆಸಿದ ಮಂಗಳೂರಿನ ವಿಶೇಷ ನ್ಯಾಯಾಲಯ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.












Click it and Unblock the Notifications