ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರ‍್ಯಾಗಿಂಗ್ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲರ ಮೇಲೆಯೇ ಹಲ್ಲೆ ಮಾಡಿದ ವಿದ್ಯಾರ್ಥಿಗಳು!

|
Google Oneindia Kannada News

ಮಂಗಳೂರು, ಮಾರ್ಚ್ 5: ಸುರತ್ಕಲ್ ಬಳಿಯ ಮುಕ್ಕದ ಖಾಸಗಿ ಕಾಲೇಜೊಂದರಲ್ಲಿ ರ‍್ಯಾಗಿಂಗ್ ನಡೆಸಿದ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಪ್ರಾಂಶುಪಾಲರಿಗೇ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ.

ಹಲ್ಲೆ ನಡೆಸಿದ ಮಹಮ್ಮದ್‌ ಬಾಝಿಲ್, ಸಂಭ್ರಮ್ ಆಳ್ವ, ಸಮೀಲ್, ಅಶ್ವಿನ್ ಎಸ್‌. ಜಾನ್ಸನ್‌ ಎಂಬ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಪ್ರಕರಣ ವಿವರ:
ಕಾಲೇಜಿನಲ್ಲಿ ರ‍್ಯಾಗಿಂಗ್ ನಡೆಸಿರುವ ಬಗ್ಗೆ ಕಿರಿಯ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದಾರೆ. ಅದರಂತೆ ನಾಲ್ವರು ವಿದ್ಯಾರ್ಥಿಗಳನ್ನು ಕರೆದ ಪ್ರಾಂಶುಪಾಲರು ಬುದ್ಧಿಮಾತು ಹೇಳಿದ್ದಲ್ಲದೆ, ಇದನ್ನು ಹೀಗೆ ಮುಂದುವರಿಸಿದರೆ ಕಾಲೇಜಿನಿಂದ ಹೊರ ಹಾಕುವುದಾಗಿ ಎಚ್ಚರಿಸಿದ್ದಾರೆ.

Mangaluru: Students Assault On Principal At Mukka Private College

ಈ ವೇಳೆ ವಿದ್ಯಾರ್ಥಿಗಳು ಪ್ರಾಂಶುಪಾಲರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಬೆಳವಣಿಗೆಯಿಂದ ಪ್ರಾಂಶುಪಾಲರೇ ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ಹಲ್ಲೆ ಮಾಡಿದ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮತ್ತೆ ರ‍್ಯಾಗಿಂಗ್:
ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಎರಡು ತಿಂಗಳ ಅವಧಿಯಲ್ಲಿ ಇದು ಮೂರನೇ ರ‍್ಯಾಗಿಂಗ್‌ ಪ್ರಕರಣ ವರದಿಯಾಗಿದೆ. ನಗರದ ಕಾಲೇಜುಗಳಲ್ಲಿ ರ‍್ಯಾಗಿಂಗ್ ಪ್ರಕರಣ ಹೆಚ್ಚುತ್ತಿರುವುದು ಹೊರ ಜಿಲ್ಲೆ, ರಾಜ್ಯದ ಪಾಲಕರು ಆತಂಕ ಪಡುವಂತಾಗಿದೆ. ಈ ಹಿಂದೆ ವಳಚ್ಚಿಲ್ ಹಾಗೂ ದೇರಳಕಟ್ಟೆಯಲ್ಲಿ ರ‍್ಯಾಗಿಂಗ್ ಪ್ರಕರಣ ಬೆಳಕಿಗೆ ಬಂದಿತ್ತು.

English summary
Four students assaulted on college Principal who questioned students ragging at a private college Mukka near Surathkal, Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X