ಪೈಲಟ್ ಸಮಯಪ್ರಜ್ಞೆ, ತಪ್ಪಿದ ಮಿಗ್ ಏರ್ ಕ್ರಾಫ್ಟ್ ದುರಂತ
ಮಂಗಳೂರು: ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಭಾರಿ ದುರಂತದಿಂದ ಏರ್ ಕ್ರಾಫ್ಟ್ ಬಚಾವಾಗಿದೆ. ಭಾರತೀಯ ಸೇನೆಗೆ ಸೇರಿದ ಮಿಗ್ ಏರ್ ಕ್ರಾಫ್ಟ್ ತಾಂತ್ರಿಕ ತೊಂದರೆಯಿಂದ ತುರ್ತು ಭೂಸ್ಪರ್ಶ ಮಾಡಿದೆ.
ಮಂಗಳೂರು, ಮಾರ್ಚ್ 01: ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಭಾರಿ ದುರಂತದಿಂದ ಏರ್ ಕ್ರಾಫ್ಟ್ ಬಚಾವಾಗಿದೆ. ಭಾರತೀಯ ಸೇನೆಗೆ ಸೇರಿದ ಮಿಗ್ ಏರ್ ಕ್ರಾಫ್ಟ್ ತಾಂತ್ರಿಕ ತೊಂದರೆಯಿಂದ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮಂಗಳವಾರ ನಡೆದಿದೆ. ಈ ಏರ್ ಕ್ರಾಫ್ ಚಿತ್ರಗಳು ಇಲ್ಲಿವೆ.
ಮಿಗ್ ಫೈಟರ್-29 ಯುದ್ಧ ವಿಮಾನ ಮಂಗಳವಾರ ಸಂಜೆ 4 ಗಂಟೆ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು.

ರನ್ ವೇಗೆ ಏರ್ ಕ್ರಾಫ್ಟ್ ಇಳೀಯುತ್ತಿದ್ದತೆ ವಿಮಾನದ ಎರಡು ಟೈರ್ ಸ್ಫೋಟಗೊಂಡ ಕಾರಣ, ವಿಮಾನ ನಿಲ್ದಾಣದಲ್ಲಿ ಇತರೆ ವಿಮಾನಗಳ ಹಾರಾಟವನ್ನು ತಾತಾಲ್ಕಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಬಜ್ಪೆಯ ವಿಮಾನ ನಿಲ್ದಾಣದ ಕಾರ್ಯ ನಿರ್ವಹಣೆ ಸುಮಾರು 5 ಗಂಟೆಗೂ ಹೆಚ್ಚು ಕಾಲ ಸ್ಥಗಿತಗೊಂಡಿತ್ತು. ಒಟ್ಟು 8 ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗಿತ್ತು. ಮಂಗಳೂರಿಗೆ ಬರುವ ವಿಮಾನಗಳನ್ನು ಬೆಂಗಳೂರಿಗೆ ಕಳಿಸಲಾಯಿತು.

ಗೋವಾದಲ್ಲಿದ್ದ ಯುದ್ಧ ವಾಹಕ ನೌಕೆ ಐಎನ್ ಎಸ್ ವಿಕ್ರಮಾದಿತ್ಯದಿಂದ ಮಿಗ್ 29 ಟೇಕಾಫ್ ಆಗಿತ್ತು.
Air traffic disrupted temporarily at Mangalore airport view Emergency landing of Naval fighter. Efforts in hand 2 resume services earliest
— SpokespersonNavy (@indiannavy) February 28, 2017
ತರಬೇತಿಗಾಗಿ ಪೈಲಟ್ ಗಳು ಹಾರಾಟ ನಡೆಸುವಾಗ ಹೈಡ್ರಾಲಿಕ್ ಸಮಸ್ಯೆ ಎದುರಾಗಿದೆ. ನಂತರ ತಡ ಮಾಡದೆ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಏರ್ ಕ್ರಾಫ್ಟ್ ತಿರುಗಿಸಿ ತುರ್ತು ಭೂ ಸ್ಪರ್ಶ ಮಾಡಿದ್ದಾರೆ.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications