2 ಅಕ್ರಮ ಮೀನುಗಾರಿಕಾ ದೋಣಿ ವಶಪಡಿಸಿಕೊಂಡ ಕೋಸ್ಟ್ ಗಾರ್ಡ್

ಮಂಗಳೂರು, ಅಕ್ಟೋಬರ್ 4: ಆಳ ಸಮುದ್ರದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಎರಡು ಮೀನುಗಾರಿಕಾ ದೋಣಿಗಳನ್ನು ಭಾರತೀಯ ತಟ ರಕ್ಷಣಾ ಪಡೆ ವಶಪಡಿಸಿಕೊಂಡಿದೆ.

ಕೋಸ್ಟ್ ಗಾರ್ಡ್ ಶಿಪ್ ಸಿ-420 ಸಮುದ್ರದಲ್ಲಿ ಪಹರೆ ನಡೆಸುತ್ತಿದ್ದ ಸಂದರ್ಭದಲ್ಲಿ ಎರಡು ಮೀನುಗಾರಿಕಾ ದೋಣಿಗಳು ಅಕ್ರಮವಾಗಿ ಬುಲ್ ಟ್ರಾಲಿಂಗ್ ಮೀನುಗಾರಿಕೆ ನಡೆಸುತ್ತಿರುವುದು ಕಂಡುಬಂದಿದೆ .

Mangaluru: Two fishing boats seized by Indian Coast Guard

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಡಗು, ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಸಾಗರ್ ಕುಸುಮ್ ಹಾಗು ಸಾಗರ್ ಕುಸುಮ್ (ವಿ) ಹೆಸರಿನ 2 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡಿದೆ.

ವಶಪಡಿಸಿಕೊಂಡ ಮೀನುಗಾರಿಕಾ ದೋಣಿಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಅಧಿಕೃತ ದಾಖಲೆಗಳು ಇರಲಿಲ್ಲ. ಹಾಗೂ ಮೀನುಗಾರಿಕಾ ದೋಣಿಯಲ್ಲಿದ್ದವರಲ್ಲಿ ಸರಿಯಾದ ಗುರುತಿನ ಚೀಟಿಗಳು ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ .

Mangaluru: Two fishing boats seized by Indian Coast Guard

ಈ ಹಿನ್ನೆಲೆಯಲ್ಲಿ ಭಾರತೀಯ ತಟ ರಕ್ಷಣಾ ಪಡೆ 2 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡು ಕಾರವಾರದ ಕರಾವಳಿ ಕಾವಲು ಪಡೆಯ ಪೊಲೀಸರಿಗೆ ಹಸ್ತಾಂತರಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+