ಮಂಗಳೂರಲ್ಲಿ ಜಲಕ್ಷಾಮ: ಕುಡಿಯುವ ನೀರು ಪೂರೈಕೆಗೆ ವೇಳಾಪಟ್ಟಿ
ಏಪ್ರಿಲಿಗೂ ಮೊದಲೇ ಮಂಗಳೂರಲ್ಲಿಯೂ ಜಲಕ್ಷಾಮ ಕಾಣಿಸಿಕೊಂಡಿದೆ. ಬಿಸಿಲ ಬೇಗೆಗೆ ತುಂಬೆ ಅಣೆಕಟ್ಟಿನಲ್ಲಿ ನೇತ್ರಾವತಿ ನದಿ ನೀರಿನ ಒಳಹರಿವು ಸ್ಥಗಿತಗೊಂಡಿದೆ. ಹೀಗಾಗಿ ಮಂಗಳೂರು ಮಹಾನಗರ ಪಾಲಿಕೆ ನೀರಿನ ಪೂರೈಕೆಯಲ್ಲಿ ಕಡಿತ ಮಾಡಲು ಮುಂದಾಗಿದೆ.
ಮಂಗಳೂರು, ಮಾರ್ಚ್ 16: ಏಪ್ರಿಲಿಗೂ ಮೊದಲೇ ಮಂಗಳೂರಲ್ಲಿಯೂ ಜಲಕ್ಷಾಮ ಕಾಣಿಸಿಕೊಂಡಿದೆ. ಬಿಸಿಲ ಬೇಗೆಗೆ ತುಂಬೆ ಅಣೆಕಟ್ಟಿನಲ್ಲಿ ನೇತ್ರಾವತಿ ನದಿ ನೀರಿನ ಒಳಹರಿವು ಸ್ಥಗಿತಗೊಂಡಿದೆ. ಹೀಗಾಗಿ ಮಂಗಳೂರು ಮಹಾನಗರ ಪಾಲಿಕೆ ನೀರಿನ ಪೂರೈಕೆಯಲ್ಲಿ ಕಡಿತ ಮಾಡಲು ಮುಂದಾಗಿದೆ.
ಮಾರ್ಚ್ 20ರಿಂದ ಪ್ರತಿ ಒಂದೂವರೆ ದಿನಕ್ಕೊಮ್ಮೆ ನೀರು ಪೂರೈಕೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಕವಿತಾ ಸನಿಲ್ ತಿಳಿಸಿದ್ದಾರೆ. ಸದ್ಯ ತುಂಬೆ ಅಣೆಕಟ್ಟಿನಲ್ಲಿ ಲಭ್ಯವಿರುವ ನೀರನ್ನು ಮೇ ಅಂತ್ಯದವರೆಗೆ ನಗರದ ಜನರಿಗೆ ಪೂರೈಕೆ ಮಾಡಬೇಕಾಗಿದೆ. ಇದರ ಸಲುವಾಗಿ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. [ಮಂಗಳೂರಿನಲ್ಲಿ ವಿಚಾರವಾದಿ ನರೇಂದ್ರ ನಾಯಕ್ ಮೇಲೆ ದಾಳಿಗೆ ಯತ್ನ?]
ತುಂಬೆಯ ಎಎಂಆರ್‌ಡ್ಯಾಂನಲ್ಲಿ 6.25 ಮೀಟರ್ ನೀರು ಇದೆ. ಇದು 40 ದಿನಗಳಿಗೆ ಸಾಕಾಗಬಹುದು. ಅಲ್ಲದೆ ತುಂಬೆಯಲ್ಲಿ 4.15 ಮೀಟರ್‌ನಷ್ಟು ನೀರು ಸಂಗ್ರಹವಿದ್ದು 20 ದಿನಕ್ಕೆ ಸಾಕು. ಈಗಾಗಲೇ ಸುಬ್ರಹ್ಮಣ್ಯ, ಸುಳ್ಯ ಭಾಗಗಳಲ್ಲಿ ಮಳೆ ಬಿದ್ದಿದೆ. ಮಳೆ ಇನ್ನಷ್ಟು ಬಿದ್ದು ಮಾರ್ಚ್ 20ರ ಮೊದಲು ಹರಿವು ಹೆಚ್ಚಿದರೆ ಈ ಆದೇಶ ಹಿಂಪಡೆಯುವ ಸಾಧ್ಯತೆ ಇದೆ.
ಕಳೆದ ವರ್ಷ ನೀರು ಸ್ಥಗಿತ ಮಾಡುವಾಗ ತಡವಾಗಿತ್ತು. ಹೀಗಾಗಿ ಕೊನೆಯ ಕೆಲ ದಿನಗಳು ನಗರಕ್ಕೆ ನೀರು ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಎದುರಾಗಿತ್ತು. ಹಾಗಾಗಿ ಈ ಬಾರಿ ಸಾಕಷ್ಟು ಮುಂಚಿತವಾಗಿಯೇ ನೀರು ನಿಯಂತ್ರಣ ಮಾಡಲಾಗುತ್ತಿದೆ. ಸದ್ಯಕ್ಕೆ ನಿರ್ಮಾಣ ಹಂತದ ಕಟ್ಟಡಗಳಿಗೆ ನೀರು ಸ್ಥಗಿತಗೊಳಿಸಿಲ್ಲ. ಮುಂದೆ ಅಗತ್ಯವಿದ್ದರೆ ಏಪ್ರಿಲ್ ತಿಂಗಳಿಂದ ಅವರಿಗೂ ನೀರು ಸ್ಥಗಿತಗೊಳಿಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.
ಇನ್ನು ಎಸ್‌ಇಝಡ್ ಹಾಗೂ ಎಂಆರ್‌ಪಿಎಲ್‌ಗೂ ಜಿಲ್ಲಾಧಿಕಾರಿ ಆದೇಶದ ಮೇರೆಗೆ ನೀರಿನ ಪೂರೈಕೆ ಕಡಿಮೆ ಮಾಡಲಾಗಿದೆ. ಹೊಸ ಕಟ್ಟಡ ನಿರ್ಮಾಣಕ್ಕೂ ನೀರಿನ ಸರಬರಾಜು ಸ್ಥಗಿತಗೊಳಿಸಲಾಗಿದೆ.
ಮುಂದಿನ ನೀರು ಪೂರೈಕೆ ವೇಳಾಪಟ್ಟಿ
ಮಾ.20ರ ಸೋಮವಾರದಿಂದ ಬೆಳಗ್ಗೆ 6ರಿಂದ ಮಂಗಳವಾರ ಸಂಜೆ 6ರವರೆಗೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಮಂಗಳವಾರ ಸಂಜೆ 6ರಿಂದ ಗುರುವಾರ ಸಂಜೆ 6ರವರೆಗೆ ಎಲ್ಲಾ ಬಳಕೆದಾರರಿಗೆ ನೀರು ಪೂರೈಕೆಯಾಗಲಿದೆ.
ಗುರುವಾರ ಸಂಜೆ 6ರಿಂದ ಶನಿವಾರ ಬೆಳಗ್ಗೆ 6ರವರೆಗೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಶನಿವಾರ ಬೆಳಗ್ಗೆ 6ರಿಂದ ಸೋಮವಾರ ಬೆಳಗ್ಗೆ 6ರವರೆಗೆ ನೀರು ಪೂರೈಕೆಯಾಗಲಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications