ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು: ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಪ್ರಶಸ್ತಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಫೆಬ್ರವರಿ 2 : ಜಿಲ್ಲಾ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜ ಸೇವೆ, ಸಂಗೀತ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ ಮಕ್ಕಳಿಗೆ ಕೆಳದಿ ಚೆನ್ನಮ್ಮ ಯೋಜನೆಯಡಿ ಜಿಲ್ಲಾ ಮಟ್ಟದ 2016-17ನೇ ಸಾಲಿನ ಪ್ರಶಸ್ತಿಯನ್ನು ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ನೀಡುತ್ತದೆ.

ಮಕ್ಕಳ ವಯಸ್ಸು 9 ರಿಂದ 16 ವರ್ಷದೊಳಗಿರಬೇಕು. (8 ವರ್ಷಕ್ಕೆ ಮೇಲ್ಪಟ್ಟಿರಬೇಕು ಹಾಗೂ ಜುಲೈ 31ಕ್ಕೆ 16 ವರ್ಷದೊಳಗಿರಬೇಕು) ಜನನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟಿರಬೇಕು.

Mangaluru woman and child development application invited hoysalaa and keladi chennamma award apply now

ಈ ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ. ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರತಕ್ಕದ್ದು.

ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ, ಒಟ್ಟು 4 ಮಕ್ಕಳನ್ನು ಆಯ್ಕೆ ಮಾಡಿ, ಆಯ್ಕೆಯಾದ ಪ್ರತಿ ಮಗುವಿಗೆ ತಲಾ 10,000 ರು. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.

ಅರ್ಜಿ ಕಳುಹಿಸಬೇಕಾದ ವಿಳಾಸ : ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್ ಅಶೋಕ ನಗರ ಅಂಚೆ, ದ.ಕ ಜಿಲ್ಲೆ, ಮಂಗಳೂರು- 575006 ಇವರಿಗೆ ಫೆಬ್ರವರಿ 10ರೊಳಗೆ ಸಲ್ಲಿಸಬೇಕಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2451254, 2453071ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

English summary
Mangaluru woman and child development application invited hoysala award keladi chennamma award. Children should be between 9 to 16 years and should show talent in arts, music, social service, sports, cultural activities etc.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X