ಅತ್ಯಾಚಾರಗೈದು ಮಹಿಳೆ ಕೊಲೆ : ಆರೋಪಿಗೆ ಜೀವಾವಧಿ ಶಿಕ್ಷೆ
ಮಂಗಳೂರು, ಜನವರಿ 17 : ಯುವತಿಯೋರ್ವಳನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗೆ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
61 ವರ್ಷದ ರವೀಂದ್ರನ್ ಆಲಿಯಾಸ್ ರವಿ ರವಿ 2014ರ ಜನವರಿಯಲ್ಲಿ ನಗರದ ವಸತಿಗೃಹವೊಂದರಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿ ಆಕೆಯ ಚಿನ್ನಾಭರಣ ದೋಚಿ ಪರಾರಿಯಾಗಿದ್ದ.

ಈ ಸಂಬಂಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿರುವುದನ್ನು ಖಚಿತ ಪಡಿಸಿಕೊಂಡು ವಶಕ್ಕೆ ಪಡೆದಿದ್ದರು.
ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.












Click it and Unblock the Notifications