ಮುನ್ನೂರು ಗ್ರಾಮ ಪಂಚಾಯತ್ ಪಿಡಿಓ ಆತ್ಮಹತ್ಯೆ

ಮಂಗಳೂರು ಜೂನ್ 13: ಗ್ರಾಮ ಪಂಚಾಯತ್ ನ ಪಿಡಿಓ ಅಧಿಕಾರಿ ಕಚೇರಿಯ ಶೌಚಾಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. ಉಳ್ಳಾಲ ಸಮೀಪ ಮುನ್ನೂರು ಗ್ರಾಮ ಪಂಚಾಯತ್ ನ ಪಿಡಿಓ ಕೃಷ್ಣ ಸ್ವಾಮಿ (47) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಇಂದು ಮುಂಜಾನೆ ಪಿಡಿಓ ಕೃಷ್ಣ ಸ್ವಾಮಿ ಮುನ್ನೂರು ಗ್ರಾಮ ಪಂಚಾಯತ್ ಕಚೇರಿಯ ಶೌಚಾಯಲದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಒಂದನ್ನು ಬರೆದಿದ್ದು, ಅದರಲ್ಲಿ ನನ್ನ ಬಳಿಕ ನನ್ನ ಕೆಲಸವನ್ನು ಅನುಕಂಪದ ಆಧಾರದ ಮೇಲೆ ಪತ್ನಿಗೆ ನೀಡುವಂತೆ ಕೃಷ್ಣಸ್ವಾಮಿ ವಿನಂತಿಸಿದ್ದಾರೆ.

Mannuru Gramapanchayath PDO committed suicide

ಕೃಷ್ಣ ಸ್ವಾಮಿ ಮಾಜಿ ಸೈನಿಕರಾಗಿದ್ದು, 2017 ರಲ್ಲಿ ಮುನ್ನೂರು ಗ್ರಾಮ ಪಂಚಾಯತ್ ಗೆ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ವರ್ಗಾವಣೆಗೊಂಡು ಬಂದಿದ್ದರು. ಕೃಷ್ಣಸ್ವಾಮಿ ಅವರ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದರೂ ಕೃಷ್ಣಸ್ವಾಮಿ ಕೆಲ ದಿನಗಳಿಂದ ಮಾನಸಿಕ ಖಿನ್ನತೆ ಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

Mannuru Gramapanchayath PDO committed suicide

ಕೃಷ್ಣಸ್ವಾಮಿ ಅವರ ಪತ್ನಿ ಮಂಗಳೂರಿನಲ್ಲಿ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದಾರೆ. ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಉಳ್ಳಾಲ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+