ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು: ಭಾರೀ ಮಳೆಗೆ ಮರವೂರು ಸೇತುವೆಯಲ್ಲಿ ಬಿರುಕು; ಸಂಚಾರ ಸ್ಥಗಿತ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜೂನ್ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸು ಪಡೆದಿದ್ದು, ಭಾರೀ ಮಳೆಯಿಂದ ಜಿಲ್ಲೆಯ ಜೀವನದಿಗಳು ಮೈದುಂಬಿ ಹರಿಯುತ್ತಿದೆ. ನೀರಿನ ಹರಿವಿನಿಂದ ಮಂಗಳೂರಿನ ಪಲ್ಗುಣಿ ನದಿಗೆ ಅಡ್ಡಲಾಗಿರುವ ಮರವೂರು ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸೇತುವೆ ಇದಾಗಿದ್ದು, ರಸ್ತೆ ಸಂಚಾರ ಸ್ಥಗಿತವಾಗಿದೆ.

ಮಂಗಳೂರು ಹೊರವಲಯದ ಬಜ್ಪೆಯ ಮರವೂರು ಬಳಿ ಘಟನೆ ನಡೆದಿದ್ದು, ನೀರಿನ ಹರಿವು ಹೆಚ್ಚಾದ ಹಿನ್ನೆಲೆ ಸೇತುವೆ ಬಿರುಕು‌ಬಿಟ್ಟಿದೆ. ಮರವೂರು ಸೇತುವೆ ಬಳಿ ಹೊಸ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಒಂದೇ ಭಾಗದಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಸೇತುವೆ ಬಿರುಕು ಬಿಟ್ಟ ಹಿನ್ನಲೆಯಲ್ಲಿ ಸೇತುವೆಯ ಒಂದು ಭಾಗದ ಪಿಲ್ಲರ್ ಕುಸಿದು ಸೇತುವೆಗೆ ಹಾನಿಯಾಗಿದೆ.

 Mangaluru: Maravuru Bridge Cracks Due To Heavy Rain; Road Traffic Breakdown

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಅಬ್ಬರ; ದಿನವಿಡೀ ಧಾರಾಕಾರ ಮಳೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಅಬ್ಬರ; ದಿನವಿಡೀ ಧಾರಾಕಾರ ಮಳೆ

ಮಂಗಳೂರಿನಿಂದ ವಿಮಾನ ನಿಲ್ದಾಣ ಭಾಗಕ್ಕೆ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಮಂಗಳೂರು ಪೊಲೀಸರು ವಾಹನ ಸಂಚಾರ ಬಂದ್ ಮಾಡಿದ್ದಾರೆ. ಅಲ್ಲದೇ ಈ ಮಾರ್ಗದಲ್ಲಿ ಸಂಚರಿಸುವವರಿಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿದ್ದು, ಉಡುಪಿಯಿಂದ ಬರುವವರು ಮೂಲ್ಕಿಯಲ್ಲಿ ತಿರುವು ಪಡೆದು ಕಿನ್ನಿಗೋಳಿ- ಕಟೀಲು ರಸ್ತೆಯಾಗಿ ಏರ್‌ಪೋರ್ಟ್‌ಗೆ ತೆರಳಲು ಸೂಚನೆ ನೀಡಲಾಗಿದೆ.

ಇನ್ನು ಮಂಗಳೂರು ನಗರದಿಂದ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ ಗುರುಪುರ ರಸ್ತೆಯಾಗಿ ವಿಮಾನ ನಿಲ್ದಾಣಕ್ಕೆ ತೆರಳಲು ಸೂಚಿಸಲಾಗಿದೆ. ಮಂಗಳೂರಿನ ಕಾವೂರಿನಿಂದ ಏರ್‌ಪೋರ್ಟ್‌ಗೆ ತೆರಳುವ ರಸ್ತೆ ಸಂಪೂರ್ಣ ಬಂದ್ ಮಾಡಲಾಗಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

English summary
Due to heavy rains, the crack appeared on the Maravuru Bridge on the road to Mangaluru airport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X