'ಅನಂತ್ ಕುಮಾರ್ ಹೆಗಡೆ ಸಂವಿಧಾನವನ್ನೇ ಬದಲಾಯಿಸಲು ಹೋದ ಸಂಸದ'
ಮಂಗಳೂರು, ಜನವರಿ 28: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಗೃಹ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಅನಂತ್ ಕುಮಾರ್ ಹೆಗಡೆ ಅವರ ಬಗ್ಗೆ ಮಾತನಾಡುವುದೇ ತಪ್ಪು ಅನಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅನಂತ್ ಕುಮಾರ್ ಸಾಧನೆಯನ್ನು ಪ್ರಶ್ನಿಸಿದ್ದಕ್ಕೆ ಅನಂತ್ ಕುಮಾರ್ ಹೆಗಡೆ, ಮುಸ್ಲಿಂ ಹೆಂಗಸಿನ ಹಿಂದೆ ಓಡಿ ಹೋಗಿದ್ದೆ ನಿಮ್ಮ ಸಾಧನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಕುರಿತು ಮಾತನಾಡಿದ ಎಂಬಿ ಪಾಟೀಲ್, ಅನಂತ್ ಕುಮಾರ್ ಹೆಗಡೆ ಯಾವತ್ತೂ ಕೂಡ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿ ಇರಲು ಬಯಸುವವರು. ಅವರಿಗೆ ಪಾರ್ಲಿಮೆಂಟ್, ಸಂವಿಧಾನದ ಮೇಲೆ ಗೌರವ ಇಲ್ಲ. ಸಂವಿಧಾನವನ್ನೇ ಬದಲಾಯಿಸಲು ಹೋದ ಸಂಸದ.

ಕೋಮು ಘರ್ಷಣೆ ಆರಂಭಿಸಲು ಅವರು ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಇಂತವರಿಗೆ ಲೋಕಸಭಾ ಚುನಾವಣೆಯಲ್ಲಿ ಜನರು ಸರಿಯಾದ ಉತ್ತರ ಕೊಡುತ್ತಾರೆ. ಇವರು ಪಾರ್ಲಿಮೆಂಟ್ ನಲ್ಲಿ ಇರಲಿ, ಪಂಚಾಯತ್ ನ ಸದಸ್ಯ ಕೂಡ ಆಗಲು ಯೋಗ್ಯ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.












Click it and Unblock the Notifications