ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕ್ಲಾಸ್ ಆರಂಭ; ಅಧಿಕಾರಿಗಳಿಗೆ ಫೋಟೋ ಕಳಿಸಿದ ವಿದ್ಯಾರ್ಥಿಗಳು!

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಏಪ್ರಿಲ್ 22; ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಜನ ಸೇರುವ ಎಲ್ಲಾ ಕಾರ್ಯಕ್ರಮಗಳನ್ನು, ಶಾಪಿಂಗ್ ಮಾಲ್, ಶಾಲಾ-ಕಾಲೇಜುಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ.

ಮಂಗಳೂರು ನಗರದಲ್ಲಿ ಮಾತ್ರ ಕಾಲೇಜುಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ನಡೆಸಲಾಗುತ್ತಿತ್ತು. ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಮತ್ತು ಮುಕ್ಕ ಶ್ರೀನಿವಾಸ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ.

ದಾವಣಗೆರೆ; ತರಗತಿ ನಡೆಸುವ ದೂರು, ಕಾಲೇಜುಗಳಿಗೆ ಆಯುಕ್ತರ ಎಚ್ಚರಿಕೆ ದಾವಣಗೆರೆ; ತರಗತಿ ನಡೆಸುವ ದೂರು, ಕಾಲೇಜುಗಳಿಗೆ ಆಯುಕ್ತರ ಎಚ್ಚರಿಕೆ

ಕ್ಲಾಸ್‌ಗೆ ಬರುವಂತೆ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ತಿಳಿಸಿದ್ದು ಒಂದೇ ಕೊಠಡಿಯಲ್ಲಿ ನೂರಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕೂರಿಸಿಕೊಂಡು ಪಾಠ ಮಾಡಲಾಗುತ್ತಿದೆ.

ಕೊರೊನಾ ಕರ್ಫ್ಯೂ: ಹೊಸ ಕಠಿಣ ಮಾರ್ಗಸೂಚಿ ಪ್ರಕಟ, ಏನಿರುತ್ತೆ? ಏನಿರಲ್ಲ?ಕೊರೊನಾ ಕರ್ಫ್ಯೂ: ಹೊಸ ಕಠಿಣ ಮಾರ್ಗಸೂಚಿ ಪ್ರಕಟ, ಏನಿರುತ್ತೆ? ಏನಿರಲ್ಲ?

 Medical College Conducting Class Student Sent Photos For Officials

ಮೆಡಿಕಲ್ ವಿಭಾಗದ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಎಂಬಿಬಿಎಸ್, ಬಿಪಿಟಿ, ಬಿಎಸ್ಸಿ ನರ್ಸಿಂಗ್, ಮತ್ತು ಎಂಎಲ್ಟಿ ಕ್ಲಾಸ್ ಗಳು ನಡೆಯುತ್ತಿದೆ. ಈ ಕಾಲೇಜಿನಲ್ಲಿ ಕೇರಳ- ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳೇ ಅಧಿಕವಾಗಿದ್ದು, ಭಯದಿಂದಲೇ ಕ್ಲಾಸ್‌ ಕೇಳುವಂತಾಗದೆ.

ಮಂಗಳೂರು; ಜಾತ್ರೆ ಮಾಡಿದ ದೇವಾಲಯದ ವಿರುದ್ಧ ಪ್ರಕರಣ ಮಂಗಳೂರು; ಜಾತ್ರೆ ಮಾಡಿದ ದೇವಾಲಯದ ವಿರುದ್ಧ ಪ್ರಕರಣ

ಕ್ಲಾಸ್ ನಡೆಯುತ್ತಿರುವ ಬಗ್ಗೆ ವಿದ್ಯಾರ್ಥಿಗಳೇ ಕ್ಲಾಸ್ ರೂಂ ಫೋಟೋ ತೆಗೆದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿದ್ದಾರೆ.ಸರ್ಕಾರದ ನಿಯಮ ಉಲ್ಲಂಘನೆ ಬಗ್ಗೆ ಅಧಿಕಾರಿಗಳ ಗಮನ ಸೆಳೆದಿದ್ದಾರೆ. ಈ ಬಗ್ಗೆ ಪಕ್ರಟಣೆ ಹೊರಡಿಸಿರುವ ಅಧಿಕಾರಿಗಳು ಕಾಲೇಜುಗಳು ಸರ್ಕಾರದ ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳನ್ನು ಕಾಲೇಜಿಗೆ ಬರುವಂತೆ ಒತ್ತಾಯ ಮಾಡಬಾರದು. ಶಿಕ್ಷಕರು ಮಾತ್ರ ಕಾಲೇಜಿಗೆ ಬಂದು ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 4 ರವರೆಗೆ ಕಾಲೇಜುಗಳಲ್ಲಿ ತರಗತಿಗಳು ನಡೆಯಬಾರದು. ತರಗತಿ ನಡೆಸಿದರೆ ಅಂತಹ ಶಿಕ್ಷಣ ಸಂಸ್ಥೆಗಳ‌ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

English summary
Some medical college in Mangaluru conducting class for students. Students send photos for education department officials. Karnataka government banned class till May 4, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X