ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ವೃದ್ಧ ಬಲಿ

ಮಂಗಳೂರು, ಆಗಸ್ಟ್ 13: ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಇಂದು ಕೂಡ ಮುಂದುವರೆದಿದೆ. ಹವಾಮಾನ ಇಲಾಖೆ ಕರಾವಳಿಯಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗು ಪದವಿ ಪೂರ್ವ ಕಾಲೇಜಿಗೆ ಜಿಲ್ಲಾಡಳಿತ ರಜೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ ಪ್ರದೇಶದಲ್ಲಿ ಬೆಳಗ್ಗೆಯಿಂದಲೇ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ವರುಣನ ಅಬ್ಬರಕ್ಕೆ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಬೆಳ್ತಂಗಡಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ನಿನ್ನೆ ಮಹಾಮಳೆಗೆ ಬೆಳ್ತಂಗಡಿಯಲ್ಲಿ ವೃದ್ಧರೊಬ್ಬರು ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಮರೂಡಿ ನಿವಾಸಿ ಬೊಮ್ಮಯ್ಯ ದಾಸ್(65) ನಿನ್ನೆ ಸಂಜೆ ಮನೆಯ ಸಮೀಪದಲ್ಲಿರುವ ಹೊಳೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ನೀರುಪಾಲಾಗಿದ್ದಾರೆ.

Meteorological department has issued an alert to coastal Karnataka

ಇಂದು ಮುಂಜಾನೆ ಹೊಳೆಯಿಂದ ಬೊಮ್ಮಯ್ಯ ದಾಸ್ ಅವರ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಈ ಕುರಿತು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಹೊಳೆ ನದಿಗಳು ಉಕ್ಕಿ ಹರಿಯುತ್ತಿವೆ. ಕೆಲವೆಡೆ ತಗ್ಗು ಪ್ರದೇಶಗಳಿಗೂ ಮಳೆ ಪ್ರವಾಹ ನೀರು ನುಗ್ಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+