ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ಈಶ್ವರಪ್ಪ ಸ್ಪಷ್ಟನೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ನವೆಂಬರ್ 5: ಯಾವುದೇ ಕಾರಣಕ್ಕೂ ಉತ್ತರ ಕರ್ನಾಟಕದ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.

ಮಂಗಳೂರು ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೂ ಮುನ್ನ ಮಾತನಾಡಿದ ಸಚಿವ ಈಶ್ವರಪ್ಪ, ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿರುವ ಸಿಬಿಐ ಕ್ರಮವನ್ನು ಸ್ವಾಗತಿಸುತ್ತೇನೆ ಎಂದರು.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!

ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐ ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ. ಅದೇ ರೀತಿ ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರಬಂದರೆ ತುಂಬಾ ಖುಷಿಪಡುತ್ತೇನೆ ಎಂದು ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಪಡಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದರು.

Mangalore: Minister K S Eshwarappa Reaction About Vinay Kulkarni CBI Enquiry

ಒಂದು ಕಾಲದಲ್ಲಿ ಅಧಿಕಾರ, ಹಣ ಉಪಯೋಗಿಸಿ ಕೊಲೆ, ಸುಲಿಗೆ, ಅತ್ಯಾಚಾರ, ದರೋಡೆ, ಭ್ರಷ್ಟಾಚಾರಗಳು ನಡೆಯುತ್ತಿದ್ದವು. ಅದೇ ಸರ್ಕಾರ ಯಾವಾಗಲೂ ಇರುತ್ತದೆ ಎಂದು ಹೇಳಲು ಆಗುವುದಿಲ್ಲ. ಈಗ ಸಿಬಿಐ ತನಿಖೆ ನಡೆಸುತ್ತಿದೆ. ಈ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ. ವಿನಯ್ ಕುಲಕರ್ಣಿ ಅವರನ್ನು ಗುರುವಾರ (ನ.೫) ರಂದು ಸಿಬಿಐ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದೆ.

ನವೆಂಬರ್ 7ರಂದು ವಿನಯ್ ಕುಲಕರ್ಣಿ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದರು. ಆದರೆ ಜನ್ಮದಿನಕ್ಕೂ ಮುಂಚೆಯೇ ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ತಮ್ಮ ವಿಜಯ್ ಕುಲಕರ್ಣಿ ರೀತಿಯಲ್ಲೇ ಅಣ್ಣನನ್ನೂ ಜನ್ಮದಿನ ಮುಂಚೆಯೇ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

English summary
Rural Development Minister KS Eshwarappa has made it clear that the BJP Party will not include Congress leader Vinay Kulkarni.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X