ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಕ್ಷಗಾನ ಮೇಳಗಳಿಗೆ ಸಿದ್ಧತೆ ಮಾಡಿಕೊಳ್ಳಿ: ಸಚಿವ ಶ್ರೀನಿವಾಸ ಪೂಜಾರಿ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಅಕ್ಟೋಬರ್ 6: ಯಕ್ಷಗಾನ ಮೇಳಗಳು ಕೊರೊನಾ ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯದ ವೇಳೆಗೆ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿವೆ. ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕಲಾವಿದರು ಮತ್ತು ಪೂರಕ ಕೆಲಸಗಾರರಿದ್ದಾರೆ. ಕೊರೊನಾ ವೈರಸ್ ನಿಂದಾಗಿ ಯಕ್ಷಗಾನಗಳು ನಡೆಯದೆ ಕಲಾವಿದರು ಸಂಕಷ್ಟದಿಂದ ಇದ್ದರು ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

 ದ.ಕ. ಜಿಲ್ಲೆಯಲ್ಲಿ ಅ.15ರಿಂದ ಹಂತಹಂತವಾಗಿ ಶಾಲಾ ಕಾಲೇಜು ತೆರೆಯಲು ಆದೇಶ ದ.ಕ. ಜಿಲ್ಲೆಯಲ್ಲಿ ಅ.15ರಿಂದ ಹಂತಹಂತವಾಗಿ ಶಾಲಾ ಕಾಲೇಜು ತೆರೆಯಲು ಆದೇಶ

ಮೇಳಗಳ ವ್ಯವಸ್ಥಾಪಕರಿಗೆ ಸಚಿವರ ಸೂಚನೆ

ಮೇಳಗಳ ವ್ಯವಸ್ಥಾಪಕರಿಗೆ ಸಚಿವರ ಸೂಚನೆ

ಹೀಗಾಗಿ ಯಕ್ಷಗಾನ ಮೇಳಗಳು ಕೋವಿಡ್-19 ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯಕ್ಕೆ ಪ್ರದರ್ಶನ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲಾ ಅಧಿಕಾರಿಗಳು, ಕಲಾವಿದರು ಹಾಗೂ ಮೇಳಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ಕಲಾವಿದರ ಕುಟುಂಬ ನೆರವಿಗೆ ಸರ್ಕಾರ ಸಹಾಯ ಮಾಡಬೇಕು

ಕಲಾವಿದರ ಕುಟುಂಬ ನೆರವಿಗೆ ಸರ್ಕಾರ ಸಹಾಯ ಮಾಡಬೇಕು

ಕಲಾವಿದರ ಪರವಾಗಿ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಉಜಿರೆ ಅಶೋಕ್ ಭಟ್, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಸ್ಯಕಲಾವಿದ ಸೀತಾರಾಮ್ ಕುಮಾರ್ ಮಾತನಾಡಿ, ವೃತ್ತಿಪರ ಯಕ್ಷಗಾನ ಮೇಳಗಳು ನಿಂತರೆ ಕಲಾವಿದರ ಬದುಕು ದುಸ್ತರವಾಗುತ್ತದೆ. ಈಗಾಗಲೇ ಕೋವಿಡ್-19 ನಿಂದಾಗಿ ನೊಂದ ಕಲಾವಿದರ ಕುಟುಂಬದ ನೆರವಿಗೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಮನವಿ ಮಾಡಿದರು.

ವೃತ್ತಿಪರ ಮೇಳಗಳ ಸಮಸ್ಯೆಗಳನ್ನು ಸಚಿವರಿಗೆ ವಿವರಿಸಿದರು

ವೃತ್ತಿಪರ ಮೇಳಗಳ ಸಮಸ್ಯೆಗಳನ್ನು ಸಚಿವರಿಗೆ ವಿವರಿಸಿದರು

ಕಟೀಲು ದೇವಳದ ಆಡಳಿತ ಮೊಕ್ತೇಸರ ಶ್ರೀ ಹರಿ ಅಸರಣ್ಣ ಮಾತನಾಡಿ, ಕಟೀಲಿನ ಆರು ಮೇಳಗಳು ನಿಗದಿತ ಸಮಯದಲ್ಲಿ ಪ್ರದರ್ಶನಕ್ಕೆ ಹೊರಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಬಪ್ಪನಾಡು, ಸಸಿಹಿತ್ಲು ಮೇಳಗಳ ಸಹಿತ ಅನೇಕರು ಕೊರೊನಾ ಸಂದರ್ಭದಲ್ಲಿ ಕಲಾವಿದರು ಮತ್ತು ವೃತ್ತಿಪರ ಮೇಳಗಳ ಸಮಸ್ಯೆಗಳನ್ನು ಸಚಿವರಿಗೆ ವಿವರಿಸಿದರು. ಈಗಿರುವ ಮೇಳಗಳಲ್ಲಿ ಯಾವುದಾದರೂ ನಿಲುಗಡೆಯಾದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿಯ ಸಂಪನ್ಮೂಲವಿರುವ ದೇವಳದ ಮೂಲಕ ಹೆಚ್ಚುವರಿ ಮೇಳಗಳನ್ನು ರಚಿಸಲು ಇಲಾಖೆ ಪರಿಶೀಲಿಸಬೇಕೆಂಬ ಮನವಿ ಸಭೆಯಲ್ಲಿ ಮೂಡಿಬಂದಿದೆ.

ಸರ್ಕಾರ ಕಲಾವಿದರ ಬೆಂಬಲಕ್ಕೆ ನಿಲ್ಲಲಿದೆ

ಸರ್ಕಾರ ಕಲಾವಿದರ ಬೆಂಬಲಕ್ಕೆ ನಿಲ್ಲಲಿದೆ

ಸರ್ಕಾರದ ಪರವಾಗಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂತಹ ಪರಿಸ್ಥಿತಿಯಲ್ಲಿ ಯಕ್ಷಗಾನ ಮೇಳಗಳ ಕೊನೆಯ ಕಲಾವಿದನಿಗೂ ತೊಂದರೆ ಆಗದಂತೆ ಸರ್ಕಾರ ಕಲಾವಿದರ ಬೆಂಬಲಕ್ಕೆ ನಿಲ್ಲಲಿದೆ ಎಂದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಇತರರು ಉಪಸ್ಥಿತರಿದ್ದರು.

English summary
Dakshina Kannada district Incharge minister in-charge Kota Srinivasa Poojary said Yakshagana fairs should adopt the corona rules and prepare for the show by the end of November.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X