ಸೂಲಿಬೆಲೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ರಮಾನಾಥ್ ರೈ
ಮಂಗಳೂರು, ಸೆಪ್ಟೆಂಬರ್ 23 : ಅರಣ್ಯ ಸಚಿವ ರಮಾನಾಥ್ ರೈ ಮತ್ತೆ ನಾಲಗೆ ಹರಿಬಿಟ್ಟಿದ್ದಾರೆ. ನಿನ್ನೆ (ಸೆ.22) ಉಳ್ಳಾಲದ ಅಸೈಗೋಳಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆಯವರನ್ನು ಕೆಟ್ಟ ಶಬ್ಧದಿಂದ ನಿಂದಿಸಿದ್ದಾರೆ.
ಇದೀಗ ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ತುಳು ಭಾಷೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಿದ ಸಚಿವ ರಮಾನಾಥ್ ರೈ, ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆಯವರನ್ನು ಅವಾಚ್ಯ ಶಬ್ಧಗಳಿಂದ ಟೀಕಿಸಿದ್ದಾರೆ.

ನೆಹರೂ ಕುಟುಂಬದ ಬಗ್ಗೆ ಮಾತನಾಡುವ ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ, ಇಂತವರನ್ನು ಜೈಲಿಗೆ ಹಾಕಬೇಕು ಎಂದು ಸೂಲಿಬೆಲೆ ವಿರುದ್ಧ ವಾಗ್ದಾಳಿ ನಡೆಸಿದರು.
ರೈ ಬಾಯಿಚಪಲಕ್ಕೆ ಭಾರೀ ಟೀಕೆ ವ್ಯಕ್ತವಾಗಿದ್ದು, ರೈ ಕ್ಷಮೆಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.












Click it and Unblock the Notifications