ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದ ಅನಂತನ ಸನ್ನಿಧಿಯಲ್ಲಿ ಒಂದರ ಹಿಂದೆ ಮತ್ತೊಂದು ಪವಾಡ!

|
Google Oneindia Kannada News

ಮಂಗಳೂರು, ಮೇ 16: ದಕ್ಷಿಣ ಕನ್ನಡ ಜಿಲ್ಲೆಯ ಅನಂತ ಪದ್ಮನಾಭ ದೇವಾಲಯಗಳಲ್ಲಿ ಒಂದರ ಹಿಂದೆ ಮತ್ತೊಂದು ಪವಾಡಗಳು ಬೆಳಕಿಗೆ ಬರುತ್ತಿವೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಮಂಗಳೂರು ಹೊರವಲಯದ ಅನಂತ ಪದ್ಮನಾಭ ಸುಬ್ರಹ್ಮಣ್ಯ ದೇವಾಲಯದಲ್ಲಿ ನಿನ್ನೆಯಷ್ಟೇ ಪವಾಡವೊಂದು ನಡೆದ ಘಟನೆ ಬೆಳಕಿಗೆ ಬಂದಿತ್ತು.ದೇವಾಲಯದಲ್ಲಿ ಮಗಾಪೂಜೆ ವೇಳೆ ಸುಬ್ರಹ್ಮಣ್ಯನ ವಾಹನ ನವಿಲು ಪ್ರತ್ಯಕ್ಷವಾಗಿ ಏಕಾಏಕಿ ದೇವಾಲಯ ಪ್ರವೇಶಿಸಿ ಪೂಜೆಯಲ್ಲಿ ಪಾಲ್ಗೊಂಡಿತ್ತು.

ಅಚ್ಚರಿಯ ಘಟನೆ: ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಪ್ರತ್ಯಕ್ಷವಾದ ನವಿಲು!ಅಚ್ಚರಿಯ ಘಟನೆ: ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಪ್ರತ್ಯಕ್ಷವಾದ ನವಿಲು!

ಈಗ ಬೆಳ್ತಂಗಡಿಯ ಬೆಳಲು ದೇವಾಲಯದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ದೇವಾಲಯದ ಅವರಣದಲ್ಲಿ ಪವಾಡ ನಡೆದಿರುವುದು ಬೆಳಕಿಗೆ ಬಂದಿದೆ. ಹೌದು, ಬ್ರಹ್ಮಕಲಶೋತ್ಸವ ಸಂದರ್ಭ ನಾಗರಹಾವು ಕಾಣಿಸಿಕೊಂಡು ಭಕ್ತರಲ್ಲಿ ಆಚ್ಚರಿ ಮೂಡಿಸಿದೆ.

Miracle happened in Belalu Anantha Padmanabha Subranamya temple

ಬೆಳಾಲು ಗ್ರಾಮದಲ್ಲಿರುವ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಜಿರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮ ಸಂದರ್ಭದಲ್ಲಿ ದೇವಾಲಯದ ಆವರಣದಲ್ಲಿ ನಾಗರ ಹಾವು ಕಾಣಿಸಿಕೊಂಡು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದೆ.

ಪೊಳಲಿ ರಾಜರಾಜೇಶ್ವರಿ ದೇವಾಲಯದ ಧ್ವಜಸ್ತಂಭ ಪ್ರತಿಷ್ಠೆ ವೇಳೆ ಪವಾಡ!ಪೊಳಲಿ ರಾಜರಾಜೇಶ್ವರಿ ದೇವಾಲಯದ ಧ್ವಜಸ್ತಂಭ ಪ್ರತಿಷ್ಠೆ ವೇಳೆ ಪವಾಡ!

ಬೆಳಲು ಗ್ರಾಮದ ಈ ದೇವಸ್ಥಾನದಲ್ಲಿ ಜಿರ್ಣೋದ್ಧಾರ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಅಶ್ಲೇಷ ಪೂಜೆ ವಿಜೃಂಭಣೆಯಿಂದ ನಡೆಸಲಾಗಿತ್ತು.ಬಾಲಾಲಯದಲ್ಲಿದ್ದ ದೇವರ ಮೂರ್ತಿಗಳನ್ನು ನವೀಕರಣಗೊಂಡ ಕ್ಷೇತ್ರದ ಒಳಗೆ ಕೊಂಡೊಯ್ಯುವ ಸಂದರ್ಭದಲ್ಲಿ ನಾಗರ ಹಾವು ಕಾಣಸಿಕ್ಕಿದ್ದು ಎಲ್ಲರಲ್ಲಿ ಆಶ್ಚರ್ಯ ಉಂಟುಮಾಡಿದೆ.

Miracle happened in Belalu Anantha Padmanabha Subranamya temple

ಅಲ್ಲದೇ, ಸ್ಥಳೀಯರ ಪ್ರಕಾರ ಜಿರ್ಣೋದ್ಧಾರ ಸಂದರ್ಭದಲ್ಲಿ ಈ ನಾಗರಹಾವು ಕ್ಷೇತ್ರದ ಸುತ್ತಲೂ ತಿರುಗುತ್ತಿತ್ತು ಎಂದು ಹೇಳಲಾಗಿದೆ. ಕ್ಷೇತ್ರದಲ್ಲಿ ಇಂದು ಬಿಂಬ ಪ್ರತಿಷ್ಠಾಪನೆ ನಡೆಯಲಿದ್ದು, ಬಿಂಬ ಪ್ರತಿಷ್ಠಾಪನೆಗೆ ಮುಂಚೆಯೇ ನಾಗರಹಾವು ಕಾಣಿಸಿಕೊಂಡಿದೆ. ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಗದ್ದಲದ ನಡುವೆಯೇ ನಾಗರ ಹಾವು ಕಾಣಿಸಿಕೊಂಡಿದ್ದು, ನೆರೆದಿದ್ದವರಲ್ಲಿ ಒಂದೆಡೆ ಆಶ್ಚರ್ಯದ ಜೊತೆಗೆ, ಭಯ, ಭಕ್ತಿ ಇನ್ನಷ್ಟು ಹೆಚ್ಚಿಸಿದೆ.

English summary
A miracle happened at Belalu Anantha Padmanabha Subramanya temple near Belthangadi . Devotees surprised when cobra entered temple during pooja.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X