ಬಂಟ್ವಾಳ: ಮಾಣಿಯಲ್ಲಿ ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಿಕೆಟ್ ಸ್ಟಂಪ್ಸ್‌ನಿಂದ ಹಲ್ಲೆ
ಮಂಗಳೂರು, ಮೇ, 24: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಿಕೆಟ್ ಸ್ಟಂಪ್ಸ್‌ನಿಂದ ದಾಳಿ ನಡೆಸಿದ್ದಾರೆ.
ಮಾಣಿಯಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ತಂಡ ಕ್ರಿಕೆಟ್ ಸ್ಟಂಪ್ಸ್‌ನಿಂದ ಹಲ್ಲೆ ನಡೆಸಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ವಿಧಾನಸಭೆ ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಇದು ಪ್ರತೀಕಾರ ಎನ್ನುವ ಶಂಕೆಯೂ ವ್ಯಕ್ತವಾಗಿದೆ. ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಎನ್ನುವವರು ತಲ್ವಾರ್ ದಾಳಿಗೆ ಒಳಗಾದವರಾಗಿದ್ದಾರೆ.

ಹೀಗೆ ಕ್ರಿಕೆಟ್ ಸ್ಟಂಪ್ಸ್‌ನಿಂದ ದಾಳಿಗೆ ಒಳಗಾದ ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾಣಿ ಜಂಕ್ಷನ್‌ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ಕ್ರಿಕೆಟ್ ಸ್ಟಂಪ್ಸ್‌ನಿಂದ ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಒಮ್ನಿ ಕಾರಿನಲ್ಲಿ ಬಂದ ತಂಡವೊಂದು ಡಿಕ್ಕಿ ಹೊಡೆದಿದೆ. ನಂತರ ಕಾರಿನಿಂದ ಇಳಿದು ಬಂದ ದುಷ್ಕರ್ಮಿಗಳು ಕ್ರಿಕೆಟ್ ಸ್ಟಂಪ್ಸ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಹಲ್ಲೆಗೊಳಗಾದವರ ಕಾಲು ಮತ್ತು ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್, ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಲಿಂಗ ಮತ್ತಿತರರು ಹಲ್ಲೆ ನಡೆಸಿದ ಬಗ್ಗೆ ದೂರು ದಾಖಲಿಸಿದ್ದಾರೆ. ಇನ್ನು ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರ ತಂಡ ತನಿಖೆ ಮುಂದುವರೆಸಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications