ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ ಎರಚಿದ ದುಷ್ಕರ್ಮಿಗಳು

ಮಂಗಳೂರು, ಫೆಬ್ರವರಿ 3 : ಸರಕಾರವು ರಾಜ್ಯದಾದ್ಯಂತ ಆರಂಭಿಸಲು ಉದ್ದೇಶಿಸಿರುವ ಇಂದಿರಾ ಕ್ಯಾಂಟೀನ್ ಗೆ ವಿಘ್ನಗಳು ಎದುರಾಗುತ್ತಿವೆ. ಮಂಗಳೂರು ವ್ಯಾಪ್ತಿಯಲ್ಲಿ ಆರಂಭಿಸಲು ಉದ್ದೇಶಿಸಿದ್ದ ಇಂದಿರಾ ಕ್ಯಾಂಟೀನ್ ಮೇಲೆ ಕಿಡಿಗೇಡಿಗಳ ಕಣ್ಣು ಬಿದ್ದಿದೆ.

ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿರುವ ಇಂದಿರಾ ಕ್ಯಾಂಟೀನ್ ನ ಗೋಡೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ.

ನಿರ್ಮಾಣ ಹಂತದ ಇಂದಿರಾ ಕ್ಯಾಂಟೀನ್ ನ ಕಟ್ಟಡದಲ್ಲಿ ಗಾಜಿನ ಮೇಲೆ ಅಳವಡಿಸಲಾಗಿದ್ದ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಭಾವಚಿತ್ರದ ಮೇಲೆ ದುಷ್ಕರ್ಮಿಗಳು ಮಸಿ ಎರಚಿದ್ದಾರೆ. ಸುರತ್ಕಲ್ ನಲ್ಲಿ ಸ್ಥಳೀಯ ಶಾಸಕ ಮೊಯಿದ್ದೀನ್ ಬಾವಾ ಅವರ ಮುತುವರ್ಜಿಯಲ್ಲಿ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿತ್ತು .

Miscreants smear black ink on portrait of Indira Gandhi at under construction Indira Canteen

ಈ ನಡುವೆ ಕ್ಯಾಂಟೀನ್ ಕಾಮಗಾರಿ ಮೇಲೆ ಕಿಡಿಗೇಡಿಗಳು ಕಣ್ಣು ಬಿದ್ದಿದ್ದು, ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ ಬಳಿದಿದ್ದಾರೆ. ಈ ಕುರಿತು ಸುರತ್ಕಲ್ ಠಾಣೆಗೆ ದೂರು ನೀಡಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ. ಶುಕ್ರವಾರ ತಡ ರಾತ್ರಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+