ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದ ಅಖಾಡದಲ್ಲಿ ನಳಿನ್ ಕಟೀಲ್ ವಿರುದ್ಧ ಮಿಥುನ್ ರೈ?

|
Google Oneindia Kannada News

ಮಂಗಳೂರು, ಮಾರ್ಚ್ 22: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿರುಬಿಸಿಲಿನ ಬೇಗೆಯ ನಡುವೆ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಖಾಡ ಸಿದ್ಧಗೊಂಡಿದೆ.

ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಯಾಗಿ ಮೂರನೇ ಬಾರಿಗೆ ನಳಿನ್ ಕುಮಾರ್ ಕಟೀಲ್ ಅವರನ್ನು ಅಖಾಡಕ್ಕೆ ಇಳಿಸಿದೆ. ಆದರೆ ಕಾಂಗ್ರೆಸ್ ಚುನಾವಣಾ ಕಣಕ್ಕಿಳಿಸಲಿರುವ ತನ್ನ ಅಭ್ಯರ್ಥಿಯ ಹೆಸರನ್ನು ಈವರೆಗೂ ಘೋಷಿಸಿಲ್ಲ. ನಳಿನ್ ಅವರಿಗೆ ಸೂಕ್ತ ಪ್ರತಿಸ್ಪರ್ಧಿಯನ್ನು ಹುಡುಕುವಲ್ಲಿ ಕಾಂಗ್ರೆಸ್‌ ತಲೆಕೆಡಿಸಿಕೊಳ್ಳುತ್ತಿದೆ.

ದಕ್ಷಿಣ ಕನ್ನಡ ಕಾಂಗ್ರೆಸ್ ಟಿಕೆಟ್ ನಿರ್ಣಾಯಕ ಹಂತಕ್ಕೆದಕ್ಷಿಣ ಕನ್ನಡ ಕಾಂಗ್ರೆಸ್ ಟಿಕೆಟ್ ನಿರ್ಣಾಯಕ ಹಂತಕ್ಕೆ

ಯುವ ಕಾಂಗ್ರೆಸ್‌ ಮೂಲಗಳ ಪ್ರಕಾರ ಈ ಬಾರಿ ನಳಿನ್ ಎದುರಾಳಿಯಾಗಿ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರನ್ನು ಕಣಕ್ಕಿಳಿಸುವ ಎಲ್ಲಾ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಿಸಿ ರಕ್ತದ ಯುವಕ ಮಿಥುನ್ ರೈ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ವರಿಷ್ಠರು ಒಲವು ತೋರಿದ್ದಾರೆ ಎಂದು ಹೇಳಲಾಗಿದೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಕಳೆದ ಬಾರಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದಿಂದ ಮಿಥುನ್ ರೈ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತ್ತು. ಆ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ಅವಕಾಶ ನೀಡುವ ಭರವಸೆ ಕಾಂಗ್ರೆಸ್ ಹಿರಿಯ ಮುಖಂಡರು ನೀಡಿದ್ದರು ಎಂದು ಹೇಳಲಾಗಿತ್ತು. ಮುಂದೆ ಓದಿ...

 ಕೈ ತಪ್ಪಿದ ಟಿಕೆಟ್

ಕೈ ತಪ್ಪಿದ ಟಿಕೆಟ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಿಥುನ್ ರೈಗೆ ಕಾಂಗ್ರೆಸ್ ಟಿಕೆಟ್ ಸ್ವಲ್ಪದರಲ್ಲೇ ಕೈ ತಪ್ಪಿತ್ತು. ಆದ್ದರಿಂದ ಈಗ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

 ಪ್ರಬಲ ಟಿಕೆಟ್ ಆಕಾಂಕ್ಷಿಗಳು

ಪ್ರಬಲ ಟಿಕೆಟ್ ಆಕಾಂಕ್ಷಿಗಳು

ಈ ನಡುವೆ ಮಾಜಿ ಸಚಿವ ರಮಾನಾಥ ರೈ ಅವರು ಕೂಡ ದಕ್ಷಿಣ ಕನ್ನಡ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಉಳಿದಂತೆ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌, ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ ಅಧ್ಯಕ್ಷ ರಾಜೇಂದ್ರ ಕುಮಾರ್‌, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸೇರಿದಂತೆ ಕಣಚ್ಚುರ್ ಮೋನು ಟಿಕೆಟ್ ಅಕಾಂಕ್ಷಿಗಳಾಗಿದ್ದಾರೆ.

 ಜೆಡಿಎಸ್ ಜೊತೆ ಮೈತ್ರಿ;ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಸುಲಭವೇ? ಜೆಡಿಎಸ್ ಜೊತೆ ಮೈತ್ರಿ;ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆಲುವು ಸುಲಭವೇ?

 ಹೊಸ ಮುಖಕ್ಕೆ ಆದ್ಯತೆ

ಹೊಸ ಮುಖಕ್ಕೆ ಆದ್ಯತೆ

ಬಿಜೆಪಿಯ ಭದ್ರ ಕೋಟೆಯಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಮಣಿಸಲು ಹೊಸ ಮುಖವೇ ಸೂಕ್ತ ಎಂಬ ನಿರ್ಧಾರಕ್ಕೆ ಕಾಂಗ್ರೆಸ್‌ ಹೈಕಮಾಂಡ್ ಬಂದಿದೆ ಎಂದು ಹೇಳಲಾಗಿದೆ.

 ಜಿದ್ದಾಜಿದ್ದಿಯ ಹೋರಾಟಕ್ಕೆ ಸಜ್ಜು

ಜಿದ್ದಾಜಿದ್ದಿಯ ಹೋರಾಟಕ್ಕೆ ಸಜ್ಜು

ಇದೆಲ್ಲವನ್ನೂ ಗಮನಿಸಿದಾಗ ಮಿಥುನ್ ಅವರಿಗೆ ಸ್ಪರ್ಧಿಸಲು ಟಿಕೆಟ್ ನೀಡಲಿದೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ನಳಿನ್ ಕುಮಾರ್‌ ಎದುರಾಗಿ ಮಿಥುನ್ ರೈ ಸ್ಪರ್ಧಿಸುವುದೇ ಆದಲ್ಲಿ ದಕ್ಷಿಣ ಕನ್ನಡ ಚುನಾವಣಾ ಕಣ ಇನ್ನಷ್ಟು ರಂಗೇರಲಿದೆ. ಜಿದ್ದಾಜಿದ್ದಿಯ ಹೋರಾಟಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಸಾಕ್ಷಿಯಾಗಲಿದೆ.

English summary
Congress sources said that youth congress leader Mithun Rai selected as congress candidate for Dakshina kannada Lokasabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X