ಲಂಚಕ್ಕೆ ಬೇಡಿಕೆಯಿಟ್ಟ ತಾಪಂ ಕಾರ್ಯನಿರ್ವಹಣಾಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಮಂಗಳೂರು, ಸೆಪ್ಟೆಂಬರ್. 18: ಬಜೆಟ್ ಅನುದಾನ ಮಂಜೂರಾತಿಗೆ ಆರ್ಥಿಕ ಇಲಾಖೆಗೆ ಲಂಚ ನೀಡಬೇಕು ಎಂದಿದ್ದ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯ ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಈ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರವನ್ನು ಸರ್ಕಾರವೇ ಒಪ್ಪಿಕೊಂಡಂತೆ ಆಗುತ್ತದೆ ಎಂದು ಕಿಡಿಕಾರಿದರು.

ತಾಲೂಕು ಪಂಚಾಯತ್ ನ ಇಒ ಸದಾನಂದ ತಮ್ಮ ಎದುರೇ ಈ ರೀತಿ ಹೇಳಿಕೆ ನೀಡಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಗಾಗಲೇ ನೋಟಿಸ್ ಜಾರಿ ಮಾಡಿದ್ದಾರೆ. ಅದಕ್ಕೆ 24 ಗಂಟೆಯಲ್ಲಿ ಉತ್ತರಿಸುವಂತೆ ಸೂಚಿಸಿದ್ದಾರೆ.

MLA Bharath Shetty slams state government against TP bribe case.

ಇಒ ಸದಾನಂದ ಅವರು ಈ ರೀತಿ ಹೇಳಿಕೆ ನೀಡುವಾಗ ತಾಲೂಕು ಪಂಚಾಯತ್ ಅಧ್ಯಕ್ಷರು ಅವರ ಜೊತೆಯಲ್ಲೇ ಇದ್ದರು ಎಂದು ಸ್ಪಷ್ಟ ಪಡಿಸಿದರು. ಈ ಘಟನೆ ನಡೆದು ಮೂರು ದಿನ ಕಳೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಅವರಾಗಲಿ ಅಥವಾ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಲಿ ತನಿಖೆಗೆ ಒತ್ತಾಯಿಸಿಲ್ಲ.

ಈ ಎಲ್ಲಾ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಿಂತ ಅಧಿಕಾರಿಗಳದ್ದೇ ಕಾರುಬಾರು ಎಂಬುದಕ್ಕೆ ಇದು ನಿದರ್ಶನವಾಗಿದೆ ಎಂದು ಆರೋಪಿಸಿದರು.

ಆರ್ಥಿಕ ಮಂಜೂರಾತಿಗೆ ಲಂಚ ನೀಡಬೇಕಾಗುತ್ತದೆ. ಅದಕ್ಕಾಗಿ ಪಿಡಿಒಗಳಿಂದ ಹಣ ಪಡೆಯಬೇಕಾಗುತ್ತದೆ ಎಂದು ತಾಲೂಕು ಪಂಚಾಯತ್ ಇಒ ಹೇಳಿರುವುದರಿಂದ, ಸರ್ಕಾರದ ಯೋಜನೆ ಕಾರ್ಯಗತಗೊಳ್ಳಬೇಕಾದರೆ ಭ್ರಷ್ಟಾಚಾರ ಅನಿವಾರ್ಯ ಎಂದು ಅಧಿಕಾರಿಯೇ ಒಪ್ಪಿಕೊಂಡಂತಾಗಿದೆ.

ನೋಟಿಸ್ ಹೊರತುಪಡಿಸಿ, ತಾಲೂಕು ಪಂಚಾಯತ್ ಇಒ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನು ಗಮನಿಸಿದರೆ, ರಾಜ್ಯ ಸರ್ಕಾರವೂ ಭ್ರಷ್ಟಾಚಾರಕ್ಕೆ ಕೈಜೋಡಿಸಿದಂತೆ ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಒ ಸದಾನಂದ ಮಂಗಳೂರು ತಾಲೂಕು ಪಂಚಾಯತ್ ಪ್ರಭಾರ ಇಓ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಮೂಲಹುದ್ದೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ. ಈ ನಡುವೆ ಇ.ಓ ಹುದ್ದೆಯ ಪ್ರಭಾರದಿಂದ ಅವರನ್ನು ಬಿಡುಗಡೆ ಮಾಡಲಾಗಿದ್ದು, ತಾಲೂಕು ಪಂಚಾಯತ್ ಸಹಾಯಕ ನಿರ್ದೇಸಕರಾಗಿ ಮುಂದುವರೆಯುವಂತೆ ಅದೇಶ ಹೊರಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+