ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ರಾಜಕಾರಣದಲ್ಲಿ ಇನ್ನು ಬಚ್ಚಾ:ಶಾಸಕ ಸುನಿಲ್ ಕುಮಾರ್

|
Google Oneindia Kannada News

ಮಂಗಳೂರು, ಮಾರ್ಚ್ 25:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಆರಂಭವಾಗಿದೆ.ಇಂದು ಸೋಮವಾರ ಬಿಜೆಪಿ ಆಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ತೆರಳಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ನಾಮ ಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಇಂದು ಮುಂಜಾನೆ ಶ್ರೀ ಕ್ಷೇತ್ರ ಕಟೀಲ್ ಗೆ ತೆರಳಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

ನಗರದ ಬಂಟ್ಸ್ ಹಾಸ್ಟೆಲ್ ಬಳಿ ಆರಂಭಿಸಲಾಗಿರುವ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಕಾರ್ಯಕರ್ತರ ಸಮಾವೇಶ ‌ನಡೆಸಿದ ಬಳಿಕ, ಪಕ್ಷದ ಪ್ರಮುಖರ ಜತೆ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.

MLA Sunil Kumar talked about Mithun rai

ಈ ಸಂಧರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುರುಷೋತ್ತಮ ಭಟ್ ಉಪಸ್ಥಿತರಿದ್ದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪಕ್ಷದ ಹಿರಿಯರು ನನ್ನ ಮೇಲೆ ವಿಶ್ವಾಸವಿಟ್ಟು, ಮೂರನೇ ಬಾರಿಗೆ ಅವಕಾಶ ನೀಡಿದ್ದಾರೆ. ದೇವರ, ಹಿರಿಯರ ಆಶೀರ್ವಾದ ಪಡೆದು ಇಂದು ನಾಮಪತ್ರ ಸಲ್ಲಿಸಿದ್ದೇನೆ . ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 ದಕ್ಷಿಣ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಗೆ ಸ್ವಪಕ್ಷಿಯರಿಂದಲೇ ಭಾರೀ ವಿರೋಧ ದಕ್ಷಿಣ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಗೆ ಸ್ವಪಕ್ಷಿಯರಿಂದಲೇ ಭಾರೀ ವಿರೋಧ

ಈ ಮೊದಲು ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಆಭ್ಯರ್ಥಿ ಬಜರಂಗದಳ ನಿಷೇಧ ಮಾಡ್ತೀವಿ ಅಂತಾ ಹೇಳಿದ್ದಾರೆ. ಎಂತೆಂಥ ಕಾಂಗ್ರೆಸ್ ನಾಯಕರರಿಗೆ ನಿಷೇಧ ಮಾಡಲು ಸಾಧ್ಯವಾಗಿಲ್ಲ. ಆ ಬಚ್ಚಾ ರಾಜಕಾರಣಿಯಿಂದ ನಿಷೇಧಿಸಲು ಸಾಧ್ಯನಾ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ರಾಜಕಾರಣದಲ್ಲಿ ಇನ್ನು ಬಚ್ಚಾ ಎಂದು ವ್ಯಂಗ್ಯವಾಡಿದ ಸುನಿಲ್ ಕುಮಾರ್, ಚುನಾವಣೆಯಲ್ಲಿ ಬಿಜೆಪಿ ವಿಜಯದ ಬಳಿಕ ಗ್ರಾಮ ಗ್ರಾಮದಲ್ಲಿ ಬಜರಂಗದಳ ಶಾಖೆ ಆರಂಭಿಸಲಾಗುವುದು. ಬಜರಂಗದಳ ಶಾಖೆ ತೆರೆದು ಸಂಘಟನೆ ಬಲಿಷ್ಠ ಮಾಡಲಾಗುವುದು ಎಂದು ತಿಳಿಸಿದರು.

English summary
BJP Candidate for Dakshina Kannada Lok Sabha constituency MP Nalin Kumar Kateel field the nomination in Mangaluru DC office. Before that he visited Shri Kateelu temple and offered pooja to Sri Duraga Parameshwari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X