ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೋವಾಗೆ ಮಂಗಳೂರು ಆದಾಯ ತೆರಿಗೆ ಕಚೇರಿ ಸ್ಥಳಾಂತರ; ಶಾಸಕರ ಸ್ಪಷ್ಟನೆ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 16: ಮಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಯನ್ನು ಗೋವಾಗೆ ಸ್ಥಳಾಂತರಗೊಳಿಸುವ ಅಥವಾ ವಿಲೀನಗೊಳಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್.

ಮಂಗಳೂರಿನ ಆದಾಯ ತೆರಿಗೆ ಕಚೇರಿಯಲ್ಲಿ ಆದಾಯ ತೆರಿಗೆ ಪ್ರಧಾನ ಆಯುಕ್ತರ ಹುದ್ದೆ ಇದೆ. ಗೋವಾದಲ್ಲೂ ಪ್ರಧಾನ ಆಯುಕ್ತರ ಹುದ್ದೆ ಇದೆ. ಈ ಎರಡು ಕಚೇರಿಯ ಹುದ್ದೆಯನ್ನು ಸೇರಿಸಿ ಒಂದೇ ಪ್ರಧಾನ ಆಯುಕ್ತರನ್ನು ನಿಯೋಜನೆ ಮಾಡಬೇಕೆಂಬ ಪ್ರಸ್ತಾಪವಿದೆ. ಹೀಗಾಗಿ ಮಂಗಳೂರಿನ ಪ್ರಧಾನ ಆಯುಕ್ತರ ಹುದ್ದೆ ಮಾತ್ರ ಗೋವಾಗೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ಇಡೀ ಕಚೇರಿ ಗೋವಾ ಕಚೇರಿಯೊಂದಿಗೆ ವಿಲೀನವಾಗುತ್ತಿದೆ ಎಂಬ ಸುದ್ದಿ ಸುಳ್ಳು ಎಂದರು.

ಪಣಜಿಗೆ ಹುಬ್ಬಳ್ಳಿಯ ಪಿಸಿಐಟಿ ಕಚೇರಿ ಸ್ಥಳಾಂತರಿಸದಂತೆ ಮನವಿಪಣಜಿಗೆ ಹುಬ್ಬಳ್ಳಿಯ ಪಿಸಿಐಟಿ ಕಚೇರಿ ಸ್ಥಳಾಂತರಿಸದಂತೆ ಮನವಿ

ಮಂಗಳೂರಿನ ಅತ್ತಾವರದ ಆದಾಯ ತೆರಿಗೆ ಇಲಾಖೆ ವ್ಯಾಪ್ತಿಯಲ್ಲಿ ಉತ್ತಮ ಆದಾಯ ಬರುತ್ತಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಸುಮಾರು ನಾಲ್ಕು ಸಾವಿರ ಕೋಟಿ ರೂ.ಗೂ ಹೆಚ್ಚು ಆದಾಯ ಕೊಡುವ ಕೇಂದ್ರವಾಗಿದೆ. ಹಾಗಾಗಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಪ್ರಹ್ಲಾದ್ ಜೋಶಿ ಅವರಿಗೆ ಪತ್ರ ಬರೆದು ಮನವರಿಕೆ ಮಾಡಿದ್ದಾರೆ. ನಾನೂ ಈ ಕುರಿತು ಸದಾನಂದ ಗೌಡ ಹಾಗೂ ಪ್ರಹ್ಲಾದ್ ಜೋಶಿ ಅವರೊಂದಿಗೆ ಮಾತನಾಡಿ ಪ್ರಧಾನ ಆಯುಕ್ತರ ಕಚೇರಿಯನ್ನು ಇಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದೇನೆ ಎಂದು ಹೇಳಿದರು.

Mangaluru: Mla Vedavyas Kamath Clarified About Shifting Income Tax Office To Goa

ಆದಾಯ ತೆರಿಗೆ ಕಚೇರಿಯೇ ಇಲ್ಲಿಂದ ಗೋವಾಕ್ಕೆ ಹೋಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಸುದ್ದಿಯ ರಾಜಕೀಯ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತಿದೆ. ಇಲ್ಲಿನ ತೆರಿಗೆದಾರರು ಗೋವಾಕ್ಕೆ ಅಲೆದಾಡಬೇಕಾಗುತ್ತದೆ ಎಂದೆಲ್ಲ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದೆ. ಜನರಿಗೆ ಈ ರೀತಿ ತಪ್ಪು ಮಾಹಿತಿ ನೀಡುವ ಕೆಲಸವನ್ನು ಮಾಡಬಾರದು ಎಂದು ಶಾಸಕ ಕಾಮತ್ ಆಕ್ರೋಶಗೊಂಡರು.

English summary
MLA Vedavyas Kamath clarified that the government didnt get any proposal to relocate Mangaluru Income Tax Department office to Goa
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X