Get Updates
Get notified of breaking news, exclusive insights, and must-see stories!

ಕಾವ್ಯ ನಿಗೂಢ ಸಾವು ಪ್ರಕರಣ: ಆಳ್ವಾಸ್ ಹೈಸ್ಕೂಲ್ ಗೆ ಉಗ್ರಪ್ಪ ಭೇಟಿ

ಮಂಗಳೂರು, ಆಗಸ್ಟ್ 1: ಆಳ್ವಾಸ್ ಹೈಸ್ಕೂಲ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಇಂದು ಮೂಡಬಿದ್ರೆಯ ಪುತ್ತಿಗೆಯಲ್ಲಿರುವ ಶಾಲೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ಉಗ್ರಪ್ಪ ಭೇಟಿ ನೀಡಿ ಮಾಹಿತಿ ಕಲೆಹಾಕಿದರು.

ಭೇಟಿ ಸಂದರ್ಭ ಅಳ್ವಾಸ್ ಹಾಸ್ಟೆಲ್ ಸಿಬ್ಬಂದಿ, ಕಾವ್ಯ ಪೂಜಾರಿಯ ಆಪ್ತ ಸ್ನೇಹಿತರು ಹಾಗೂ ದೈಹಿಕ ಶಿಕ್ಷಕರನ್ನು ಉಗ್ರಪ್ಪ ವಿಚಾರಣೆ ಕೂಡ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

MLC Ugrappa visits Moodbidri Alva’s hostel in connection with Kavya suicide case

ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್ ಸುರೇಶ್ ಹಾಗೂ ಜಿಲ್ಲಾಧಿಕಾರಿ ಕೆಜಿ ಜಗದೀಶ್ ಉಗ್ರಪ್ಪ ಅವರಿಗೆ ಸಾಥ್ ನೀಡಿದರು.

ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆ ಪ್ರಕರಣದ ವಿವಾದಕ್ಕೆ ಗುರಿಯಾಗಿದೆ.

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯಾಗಿದ್ದ 15 ವರ್ಷದ ಕಾವ್ಯ ಜುಲೈ 20ರಂದು ಕಾಲೇಜಿನ ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೋಷಕರಿಗೆ ಸಂಸ್ಥೆಯಿಂದ ತಿಳಿಸಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+