ದಕ್ಷಿಣ ಕನ್ನಡದಲ್ಲಿ ಕೇಂದ್ರದ ಯೋಜನೆಗಳ ಪ್ರಗತಿ; ಮೋದಿ ಸಂತಸ
ಮಂಗಳೂರು, ಆಗಸ್ಟ್ 3: ಕೇಂದ್ರದ ಮುದ್ರಾ ಮತ್ತು ಜನಧನ್ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಅನುಷ್ಠಾಗೊಂಡಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆಯ ಪ್ರಗತಿ ವರದಿಯನ್ನು ಹಸ್ತಾಂತರಿಸಿದರು. ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಬೇಕಾಗಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಧಾನಮಂತ್ರಿಯವರಿಗೆ ಮನವಿ ಸಲ್ಲಿಸಿದರು.
ಸಂಸದರ ಮನವಿಗೆ ಸ್ಪಂದಿಸಿರುವ ಪ್ರಧಾನಿ ಮೋದಿ, "ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಮೇಲೆ ನನಗೆ ಅತಿಯಾದ ಪ್ರೀತಿಯಿದೆ" ಎಂದು ಪ್ರತಿಕ್ರಿಯಿಸಿದರು.

ಮನವಿಯ ಬಗ್ಗೆ ತಕ್ಷಣ ಅಧಿಕಾರಿಗಳ ವಿಶೇಷ ಸಭೆ ಕರೆದು ಮುಂದಿನ ದಿನಗಳಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸುವುದಾಗಿ ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಮೋದಿ ತಿಳಿಸಿದರು. ಸಂಸದರ ಕಾರ್ಯವೈಖರಿಗೂ ಅಭಿನಂದಿಸಿದರು.












Click it and Unblock the Notifications