Monsoon Rain: ರಾಜ್ಯದ ಈ ಭಾಗದಲ್ಲಿ ಇನ್ನೂ ಒಂದು ವಾರ ಬಿರುಸು ಮಳೆ, ಇಲ್ಲಿದೆ ವಿವರ
ಮಂಗಳೂರು, ಜೂನ್, 17: ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂಗಾರು ಬಿರುಸು ಪಡೆದಿದೆ. ಮತ್ತೊಂದೆಡೆ ಬಿಪರ್‌ಜಾಯ್ ಚಂಡಮಾರುತವೂ ಕೂಡ ತೀವ್ರ ಸ್ವರೂಪ ಪಡೆದಿದ್ದು, ಇದರಿಂದ ಇಲ್ಲಿನ ಜನ ಆತಂಕಕ್ಕೆ ಒಳಗಾಗಿದ್ದಾರೆ. ಹಾಗೆಯೇ ಈ ಭಾಗದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ರಾಜ್ಯದ ಕರಾವಳಿ ಭಾಗದಲ್ಲಿ ನಿನ್ನೆಯಿಂದ (ಜೂನ್ 16) ಮತ್ತೇ ಮುಂಗಾರು ಮಳೆಯ ಆರ್ಭಟ ಹೆಚ್ಚಾಗಿದೆ. ಹಾಗೆಯೇ ಮುಂದಿನ ಒಂದು ವಾರಗಳ ಕಾಲ ಇಲ್ಲಿ ಮಳೆರಾಯ ಆರ್ಭಟಿಸುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಮತ್ತೊಂದೆಡೆ ಇಂದು (ಜೂನ್ 17) ಕರಾವಳಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಬಿಸಿಲು ಮತ್ತೆ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದೆ.

ಮತ್ತೇ ಜೂನ್ 21ರಿಂದ ಈ ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಹೆಚ್ಚಾಗುವ ಎಲ್ಲಾ ಲಕ್ಷಣಗಳು ಕೂಡ ಗೋಚರಿಸುತ್ತಿವೆ. ಹಾಗೆಯೇ ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಈ ಭಾಗದಲ್ಲಿ ಇಂದು ಗಾಳಿಯ ವೇಗವು ಗಂಟೆಗೆ 40-45 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಂಭವವಿದೆ. ಆದ್ದರಿಂದ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ನೀಡಲಾಗಿದೆ. ಅಲ್ಲದೆ ಕಳೆದ ಒಂದು ವಾರದಿಂದ ಬಿಪರ್‌ಜಾರ್ ಚಂಡಮಾರುತದ ಪ್ರಭಾವ ಹಿನ್ನೆಲೆ ಕಡಲ ತೀರದಲ್ಲಿ ಅಲೆಗಳ ಅಬ್ಬರವೂ ಕೂಡ ಬಿರುಸಾಗಿವೆ. ಗುರುವಾರ ಹಾಗೂ ಶುಕ್ರವಾರ ಕಡಲ ಅಲೆಗಳ ಅಬ್ಬರ ಕಡಿಮೆಯಾಗಿದೆ.
ಹಾಗೆಯೇ ಇಂದಿನಿಂದ ಒಂದು ವಾರಗಳ ಕಾಲ ಕರಾವಳಿ ಭಾಗದಲ್ಲಿ ಮತ್ತೇ ಮುಂಗಾರು ಆರ್ಭಟ ಹೆಚ್ಚಾಗಲಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಎನ್‌ಡಿಆರ್‌ಎಫ್ ತಂಡ ಈ ಪ್ರದೇಶಗಳಲ್ಲಿ ಬಿಡುಬಿಟ್ಟಿದೆ. ಅಲ್ಲದೆ ಸಮುದ್ರಕ್ಕೆ ಇಳಿಯದಂತೆ ಮಿನುಗಾರರಿಗೂ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದ್ದು, ಪ್ರವಾಸಿಗರಿಗೂ ಸಹ ಇಲ್ಲಿನ ಪ್ರವಾಸಿ ತಾಣಗಳಲ್ಲಿ ನಿರ್ಬಂಧ ಹೇರಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತೀವ್ರ ಸ್ವರೂಪ ಪಡೆದ ಬಿಪರ್‌ಜಾಯ್
ಬಿಪರ್‌ಜಾಯ್ ಚಂಡಮಾರುತ ಹಿನ್ನೆಲೆ ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಅದರಲ್ಲೂ ಕರಾವಳಿ ಭಾಗದಲ್ಲಿ ಇದು ತೀವ್ರ ಸ್ವರೂಪ ಪಡೆಯುತ್ತಲೇ ಇದೆ. ಅಲ್ಲದೆ ಹಲವು ಜೀವಗಳನ್ನು ಬಲಿ ಪಡೆದ ಯಮಸ್ವರೂಪಿಯೂ ಆಗಿದೆ. ಮತ್ತೊಂದೆಡೆ ಮುಂಗಾರು ಆರಂಭವಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಬೆಳ್ಳಗೆಯಿಂದಲೂ ಸಂಜೆವರೆಗೂ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಆದರೆ ಸಂಜೆ ಬಳಿಕ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದರೂ ಕೂಡ ಮಳೆಯೇ ಇಲ್ಲದಂತಾಗಿತ್ತು. ಇನ್ನು ಇಂದು ಬೆಳಗ್ಗೆಯಿಂದ ಬಿಸಿಲಿನ ವಾತಾವರಣ ಮುಂದುವರೆದಿದ್ದು ಸಂಜೆ ವೇಳೆ ನಗರದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ಆರ್ಭಟ?
ಮತ್ತೊಂದೆಡೆ ಗುರುವಾರ ದ.ಕನ್ನಡ ಜಿಲ್ಲೆಯ ಮಂಗಳೂರು, ಮಾಣಿ, ಪಣಂಬೂರು, ಸುಬ್ರಹ್ಮಣ್ಯ, ಮೂಲ್ಕಿ, ಬೆಳ್ತಂಗಡಿ, ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ, ಕೋಟ, ಸಿದ್ದಾಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮಂಕಿ, ಅಂಕೋಲಾ, ಗೇರುಸೊಪ್ಪದಲ್ಲಿ ತಲಾ 1 ಸೆಂ.ಮೀ. ಮಳೆ ಬಿದ್ದಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು..
ಇನ್ನು ಬಿಪರ್‌ಜಾಯ್ ಚಂಡಮಾರುತದ ಪ್ರಭಾವ ಹಿನ್ನೆಲೆ ಗುಜರಾತ್‌ನ ಹಲವೆಡೆಯೂ ಭಾರೀ ಮಳೆ ಬಿದ್ದಿದೆ. ಗುರುವಾರ ಸಂಜೆಯಿಂದ ಗುಜರಾತ್ ಕರಾವಳಿಯಲ್ಲಿ ಗಾಳಿ ಗಂಟೆಗೆ 100 ಕಿ.ಮೀ. ವೇಗದಲ್ಲಿ ಬೀಸುತ್ತಿರುವುದರಿಂದ ಧಾರಾಕಾರ ಮಳೆ ಸುರಿಯುತ್ತಲೇ ಇದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ಒಟ್ಟಿನಲ್ಲಿ ಜನರಿಗೆ ಬಿಪರ್‌ಜಾಯ್ ಚಂಡಮಾರುತದ ಪ್ರಭಾವದಿಂದ ಈಗಾಗಲೇ ರಾಜ್ಯದ ಕರಾವಳಿ ಭಾಗದ ಜನ ತತ್ತರಿಸಿ ಹೋಗಿದ್ದಾರೆ. ಮತ್ತೊಂದೆಡೆ ಹಲವು ಕಡೆಗಳಲ್ಲಿ ಮುಂಗಾರು ಪ್ರವೇಶ ಆದರೂ ಕೂಡ ಮಳೆ ಬಾರದೇ ಜನರು ಮೋಡದತ್ತ ಮುಖ ಮಾಡಿ ಕುಳಿತುಕೊಂಡಿದ್ದಾರೆ. ಹಾಗೆಯೇ ಕೆಲವೆಡೆ ಕೃಷಿಕರು ಮಳೆ ಇಲ್ಲದೆ ಬೇಸಿಗೆ ಬೆಳೆಗಳನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಜೊತೆಗೆ ಈಗಲೂ ಹಲವು ಜಿಲ್ಲೆಗಳಲ್ಲಿ ಮಳೆಗಾಗಿ ವಿಶೇಷ ಆಚರಣೆಗಳನ್ನು ಮಾಡುತ್ತಲೇ ಇದ್ದಾರೆ.












Click it and Unblock the Notifications